October 5, 2024

ಕೊಡಗಿನ ಶಿಖರವೊಂದಕ್ಕೆ ಚಾರಣಕ್ಕೆಂದು ಬಂದಿದ್ದ ಯುವಕನೋರ್ವ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ.

ಮಡಿಕೇರಿ ತಾಲೂಕಿನ ನಾಪೋಕ್ಲು ಬಳಿಯ ಕೊಡಗಿನ ಅತ್ಯುನ್ನತ ಶಿಖರವಾದ ತಡಿಯಂಡಮೋಳ್ ನಲ್ಲಿ ಈ ಘಟನೆ ನಡೆದಿದೆ. ಮೃತನನ್ನು ಹರಿಯಾಣ ಮೂಲದ 23 ವರ್ಷದ ಜತಿನ್ ಎಂದು ಗುರುತಿಸಲಾಗಿದೆ.

ಭಾನುವಾರ ಮೂವರು ಯುವತಿಯರು ಮತ್ತು ಮೂವರು ಯುವಕರ ತಂಡ ತಡಿಯಾಂಡಮೋಲ್ ಶಿಖರದಲ್ಲಿ ಟ್ರಕ್ಕಿಂಗ್ ಮಾಡಲು ಆಗಮಿಸಿದ್ದರು. ಚಾರಣಿಗರು ಬೆಂಗಳೂರಿನ ವಿವಿಧ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದು, ರಜೆಯ ಮೇಲೆ ಕೊಡಗಿಗೆ ಆಗಮಿಸಿದ್ದರು.

ಚಾರಣಿಗರು ಗುಡ್ಡದ ತುದಿಗೆ ತಲುಪುತ್ತಿದ್ದಂತೆ ಜತಿನ್‌ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಆತ ಅಲ್ಲೇ ಉಸಿರುಗಟ್ಟಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ಸ್ಥಳದಲ್ಲಿದ್ದ ವೈದ್ಯರು ಜತಿನ್‌ಗೆ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಆದರೆ ಫಲಕೊಡದೆ ಮೃತಪಟ್ಟಿದ್ದಾರೆ.

ಘಟನೆಯ ಬಗ್ಗೆ ನಾಪೋಕ್ಲು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಜತಿನ್ ಅವರ ಮೃತದೇಹವನ್ನು ಮೇಕ್-ಶಿಫ್ಟ್ ಸ್ಟ್ರೆಚರ್‌ನಲ್ಲಿ ಸಾಗಿಸಲಾಯಿತು. ಅರಣ್ಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಮೃತದೇಹವನ್ನು ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಸಂತ್ರಸ್ತರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ