October 5, 2024

ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಪಕ್ಷದ ವಲಯದಲ್ಲಿ ತುಂಬಾ ಒತ್ತಡ ಹಾಕುತ್ತಿದ್ದಾರೆ ಎಂದು ಹೇಳುವ ಮೂಲಕ ರಾಜಕೀಯ ನಿವೃತ್ತಿ ವಾಪಸ್ ಕುರಿತು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಸುಳಿವು ನೀಡಿದ್ದಾರೆ.

ಹಾಲಿ ಸದಾನಂದಗೌಡ ಅವರು ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿ ಪ್ರತಿನಿದಿಸುತ್ತಿದ್ದಾರೆ.

ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಿಂದ  ಸ್ಪರ್ಧೆಗೆ ಒತ್ತಾಯ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ  ಅವರು, ನನಗೆ ಚುನಾವಣೆಗೆ ಸ್ಪರ್ಧಿಸುವಂತೆ ತುಂಬಾ ಹಿಂಸೆ ಕೊಡುತ್ತಿದ್ದಾರೆ. ಆದರೆ ಸ್ಪರ್ಧೆ ಮಾಡುವ ಬಗ್ಗೆ ಮುಂದೆ ನೋಡೋಣ ಏನಾಗುತ್ತೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸದಾನಂದ ಗೌಡ ಅವರು, ಬಸವರಾಜ ಬೊಮ್ಮಾಯಿ, ಅಶೋಕ್ ತಮ್ಮ ನಿವಾಸಕ್ಕೆ ಭೇಟಿ ಮಾಡಿದ ಬಗ್ಗೆ ಸ್ಪಷ್ಟನೆ ನೀಡಿದರು. ನಮ್ಮ ಮನೆಗೆ ಪಕ್ಷದ ಹಿರಿಯ ನಾಯಕರು ಬಂದಿದ್ದು ನಿಜ. ಬೆಂಗಳೂರು ಉತ್ತರದಿಂದ ಸ್ಪರ್ಧೆ ಮಾಡಬೇಕು, ನಿಮ್ಮ ಅವಶ್ಯಕತೆ ಇದೇ ನಮಗೆ ಎಂದು ಒತ್ತಾಯಿಸಿದ್ದಾರೆ. ಅವರಷ್ಟೇ ಅಲ್ಲ, ನಮ್ಮ ಎಲ್ಲಾ ಮಾಜಿ ಮಂತ್ರಿಗಳೂ, ಶಾಸಕರೂ ಎಲ್ಲರೂ ಕೂಡ ನಿತ್ಯ ಫೋನ್ ಮಾಡಿ ಒತ್ತಡ ಹಾಕುತ್ತಿದ್ದಾರೆ ಎಂದು ತಿಳಿಸಿದರು.

ನನ್ನ ಮೇಲೆ ಅವರೆಲ್ಲ ಇಷ್ಟೊಂದು ಪ್ರೀತಿ ಇಟ್ಟುಕೊಂಡಿರುವುದು ಸಂತೋಷ ತಂದಿದೆ. ಆದರೆ ನನ್ನದೇ ಆದ ನಿರ್ಧಾರ, ಹೊಸಬರಿಗೆ ಅವಕಾಶ ಮಾಡಿಕೊಡಬೇಕೆಂಬ ಉದ್ದೇಶ ಇದೆ. ನಿನ್ನೆ ನಮ್ಮ‌ ಮನೆಗೆ ಅವರೆಲ್ಲ ಬಂದಿದ್ದಕ್ಕೆ ಅಭಿನಂದನೆ ಹೇಳುತ್ತೇನೆ. ಪದೇ ಪದೇ ನನಗೆ ಹಿರಿಯರು, ಮುಖಂಡರು ಬೆಂಗಳೂರು ಉತ್ತರದಿಂದ ನಿಲ್ಲಿ ಅಂತ ಹಿಂಸೆ ಕೊಡುತ್ತಿದ್ದಾರೆ ಎಂದರು. ಆದರೆ ಮನಸ್ಸು ಬದಲಾವಣೆ ಮಾಡ್ತೀರಾ ಎಂಬ ಪ್ರಶ್ನೆಗೆ, ನೋಡೋಣ ಏನಾಗುತ್ತೆ ಎಂದಷ್ಟೇ ಹೇಳಿದರು.

ಕೇಂದ್ರ ಸಚಿವ ಸ್ಥಾನದಿಂದ ಸದಾನಂದಗೌಡರನ್ನು ಕೈಬಿಟ್ಟ ಮೇಲೆ ಅವರು ಕಳೆದ ವರ್ಷ ತಾನು ಚುನಾವಣೆ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಸುಳಿವು ನೀಡಿದ್ದರು. ಸದಾನಂದಗೌಡರು ತಮ್ಮನ್ನು ಕೇಂದ್ರ ಸಂಪುಟದಿಂದ ಕೈಬಿಟ್ಟ ನಂತರ ಹೈಕಮಾಂಡ್ ಜೊತೆಯಲ್ಲಿ ಮುನಿಸಿಕೊಂಡಿದ್ದರು ಎಂದು ತಿಳಿದುಬಂದಿದೆ. ಇದೀಗ ಬೆಂಗಳೂರು ಉತ್ತರ ಕ್ಷೇತ್ರದಿಂದ ಮತ್ತೊಮ್ಮೆ ಸದಾನಂದಗೌಡರನ್ನು ಸ್ಪರ್ಧಿಸುವಂತೆ ಒತ್ತಡ ಹಾಕಿ ಮನವೊಲಿಸಲು ಹೈಕಮಾಂಡ್  ಮುಂದಾಗಿದೆ ಎನ್ನಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ