October 5, 2024

ಮೂಡಿಗೆರೆ ಮತ್ತು ಕಳಸ ತಾಲೂಕು ವ್ಯಾಪ್ತಿಯಲ್ಲಿ ಭೂ ಮಾಲೀಕರ ಲಾಭಿಯಿಂದಾಗಿ ದಕ್ಷ ಅಧಿಕಾರಿಯಾಗಿದ್ದ ಉಪ ವಿಭಾಗಾಧಿಕಾರಿ ಎಚ್.ಡಿ.ರಾಜೇಶ್ ಅವರನ್ನು ರಾತ್ರೋರಾತ್ರಿ ವರ್ಗಾವಣೆಗೊಳಿಸಿ ಚಿಕ್ಕಮಗಳೂರು ನಗರ ಪ್ರಾಧಿಕಾರದ ಆಯುಕ್ತರನ್ನಾಗಿ ಸರಕಾರ ನೇಮಕ ಮಾಡಿರುವುದನ್ನು ಸಿಪಿಐ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದು ಸಿಪಿಐ ಪಕ್ಷದ ಹಿರಿಯ ಮುಖಂಡ ಬಿ.ಕೆ.ಲಕ್ಷ್ಮಣ್‍ಕುಮಾರ್ ಹೇಳಿದರು.

ಅವರು ಶುಕ್ರವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಬಡವರು ನೀಡಿರುವ ಅರ್ಜಿಯನ್ನು ಯಾವುದೇ ವಿಲೆ ಮಾಡದೇ ಭೂಮಾಲೀಕರ ಅರ್ಜಿಯನ್ನು ಮಾತ್ರ ಸಕ್ರಮಗೊಳಿಸಲಾಗಿದೆ. ಈ ಅಕ್ರಮ ಭೂ ಮಂಜೂರಾತಿ ಬಗ್ಗೆ ಸಂಪೂರ್ಣ ದಾಖಲೆಯನ್ನು ಕಲೆ ಹಾಕಿ 400 ಪುಟದ ವರದಿಯನ್ನು ಸರಕಾರಕ್ಕೆ ಕಳುಹಿಸಿ ತನಿಖೆ ನಡೆಸಬೇಕೆಂದು 2022ರಲ್ಲಿ ದೂರು ನೀಡಲಾಗಿತ್ತು. ಅದರ ಪರಿಣಾಮವಾಗಿ ಅಕ್ರಮ ಭೂ ಮಂಜೂರಾತಿ ಬಗ್ಗೆ 15 ತಹಸೀಲ್ದಾರ್ ಒಳಗೊಂಡ ತಂಡ ಜಿಲ್ಲೆಗೆ ಆಗಮಿಸಿ ತನಿಖೆ ಕೈಗೊಂಡು ಒಳ್ಳೆಯ ರೂಪ ನೀಡಿತ್ತು. ಅಕ್ರಮ ಭೂ ಮಂಜೂರಾತಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ಕೈವಾಡ ಇರುವುದರಿಂದ ಅಕ್ರಮ ಭೂ ಮಂಜೂರಾತಿ ತನಿಖೆ ಅಂತಿಮ ಮಟ್ಟಕ್ಕೆ ತಲುಪುವ ಸಂದರ್ಭದಲ್ಲಿ ಸರಕಾರ ನಿಷ್ಟಾವಂತ ಅಧಿಕಾರಿ ಉಪ ವಿಭಾಗಾಧಿಕಾರಿ ಎಚ್.ಡಿ.ರಾಜೇಶ್ ಅವರನ್ನು ವರ್ಗಾವಣೆಗೊಳಿಸಲಾಗಿದೆ ಎಂದು ದೂರಿದರು.

ಸಿಪಿಐ ತಾಲೂಕು ಕಾರ್ಯದರ್ಶಿ ರಮೇಶ್ ಕೆಳಗೂರು ಮಾತನಾಡಿ, ಕಳಸ ಮತ್ತು ಮೂಡಿಗೆರೆ ತಾಲೂಕಿನಲ್ಲಿ 6750 ಎಕರೆ ಅಕ್ರಮ ಭೂ ಮಂಜೂರಾತಿ ಸಾಬೀತಾಗಿದೆ. 2020-21ನೇ ಸಾಲಿನಲ್ಲಿ 648 ಕಡತಗಳ ಬಗ್ಗೆ ಎಸಿ ಎಚ್.ಡಿ.ರಾಜೇಶ್ ಅವರು ತನಿಖೆ ಕೈಗೊಂಡಿದ್ದರು. ಅದರಲ್ಲಿ 227 ಕಡತ ಅಕ್ರಮವೆಂದು ವಜಾ ಮಾಡಿದ್ದಾರೆ. 257 ಕಡತಗಳ ತನಿಖೆ ನಡೆಯುತ್ತಿದ್ದು, ಇನ್ನು ಕೆಲವೇ ದಿನದಲ್ಲಿ ಇದೂ ಕೂಡ ವಜಾಗೊಳ್ಳುವ ಹಂತಕ್ಕೆ ತಲುಪಿತ್ತು. ಇದರಿಂದ ದಕ್ಷ ಅಧಿಕಾರಿ ಎಚ್.ಡಿ.ರಾಜೇಶ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಸರಕಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಬಹುದು. ಆದರೆ ಅಕ್ರಮ ಮಾಡಿರುವುದನ್ನು ಮುಚ್ಚಿ ಹಾಕಲು ಸಾಧ್ಯವಿಲ್ಲ. ಹಾಗಾಗಿ ಅವರ ವರ್ಗಾವಣೆ ಕೂಡಲೇ ರದ್ದುಗೊಳಿಸಿ ಈ ತನಿಖೆ ಪ್ರಕ್ರಿಯೆ ಅಂತ್ಯಗೊಳಿಸಲು ಅನುವು ಮಾಡಿಕೊಡಬೇಕು. ಇಲ್ಲವಾದರೆ ಅಕ್ರಮ ಭೂ ಮಂಜೂರಾತಿ ಬಗ್ಗೆ ನಾವು ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ರಾಜು ಬಾನಳ್ಳಿ, ಜಗದೀಶ್ ಚಕ್ರವರ್ತಿ, ವಿಠಲ್ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ