October 5, 2024

ಕಾಫಿ ಬೆಳೆಗಾರರಿಗೆ ಮಾರಕವಾಗಿರುವ ಸರ್ಪೇಸಿ ಕಾಯಿದೆಯನ್ನು ಜಾರಿಗೆ ತಂದು ಕಾರ್ಯಗತಗೊಳಿಸಿದ್ದೆ ಕಾಂಗ್ರೆಸ್ ನೇತೃತ್ವದ ಸರಕಾರವಾಗಿದೆ. ಅವರ ತಪ್ಪನ್ನು ಈಗ ಬಿಜೆಪಿ ಮೇಲೆ ಹೊರಿಸುರುವುದು ಖಂಡನಿಯ ಎಂದು ಮೂಡಿಗೆರೆ ತಾಲ್ಲೂಕು ಬಿಜೆಪಿ ವಕ್ತಾರ ನಯನ ತಳವಾರ ತಿಳಿಸಿದ್ದಾರೆ.

ಅವರು ಶುಕ್ರವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿ, ಈ ಹಿಂದೆ ರೈತರು ಬೆಳೆಯುವ ಕಾಫಿಯನ್ನು ತೋಟಗಾರಿಕಾ ಬೆಳೆಗೆ ಸೇರಿಸಿ ಅದನ್ನು ಸರ್ಫೇಸಿ ಕಾಯ್ದೆಯಲ್ಲಿ ತಂದದ್ದು ಕಾಂಗ್ರೆಸ್ ಸರಕಾರ. ಈ ಕಾನೂನು ಬಲದಿಂದ ಬ್ಯಾಂಕ್‍ಗಳು ಕಾಫಿ ತೋಟಗಳನ್ನು ಹರಾಜು ಹಾಕುತ್ತಿವೆ. ಸರ್ಫೇಸಿ ಕಾಯಿದೆಯನ್ನು ರದ್ದುಗೊಳಿಸಬೇಕೆಂದು ಬಿಜೆಪಿ ಪಕ್ಷದ ಸಂಸದರು, ಕೇಂದ್ರ ಸಚಿವೆ ಶೋಭಾ ಕರದ್ಲಾಜೆ. ಮಾಜಿ ಸಚಿವ ಸಿ.ಟಿ.ರವಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಈಗಿನ ಕಾಫಿ ಬೋರ್ಡ್ ಅಧ್ಯಕ್ಷ ದಿನೇಶ್ ದೇವವೃಂದ ಸೇರಿದಂತೆ ಹಲವರು ಮನವಿ ಮಾಡಿದ್ದಾರೆ. ಈ ಬಗ್ಗೆ ಕೇಂದ್ರದಿಂದ ಸಕರಾತ್ಮಕ ಪ್ರತಿಕ್ರಿಯೆ ನಿರಿಕ್ಷೆ ಕೂಡ ಇದೆ. ಈ ಕಾಯಿದೆ ತರುವಾಗ ಕಾಂಗ್ರೆಸ್‍ಗೆ ಜ್ಞಾನವಿರಲಿಲ್ಲವೆ ಎಂದು ಪ್ರಶ್ನಿಸಿದ್ದಾರೆ.

ಈಗಾಗಲೇ ಕಾಂಗ್ರೆಸ್ ಸರಕಾರ ಮಾಡಿರುವ ಅನೇಕ ಜನವಿರೋಧಿ ಕಾಯಿದೆಯ ಪಾಪವನ್ನು ಕೇಂದ್ರ ಸರಕಾರ ತೊಳೆಯುತ್ತಿದೆ. ಆದರೆ ಕಾಂಗ್ರೆಸ್‍ನವರು ಚುನಾವಣೆ ಹೊಸ್ತಿಲಲ್ಲಿ ಇದನ್ನೇ ಬಳಸಿಕೊಂಡು ಮತಗಳಿಸುವ ಹುನ್ನಾರ ಮಾಡುತ್ತಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರ ರೈತರ, ಮಕ್ಕಳ, ವಿದ್ಯಾನಿಧಿಯನ್ನು ವಾಪಸ್ ಪಡೆದುಕೊಂಡಿದೆ.

ಈ ಹಿಂದೆ ಬಿಜೆಪಿ ಸರಕಾರ ಸುಮಾರು 25 ಸಾವಿರ ಕೋಟಿ ಅನುದಾನವನ್ನು ರೈತರಿಗೆ ನೀಡಿತ್ತು. ಈಗ 5 ಸಾವಿರ ಕೋಟಿಗೆ ಇಳಿಸಲಾಗಿದೆ. ರಾಜ್ಯದಲ್ಲಿ ಬರಗಾಲವಿದ್ದರೂ ರೈತರಿಗೆ ಯಾವುದೇ ಪರಿಹಾರ ನೀಡುತ್ತಿಲ್ಲ. ಬೆಂಬಲ ಬೆಲೆ ಹೆಚ್ಚಳ ಮಾಡಿಲ್ಲ. ಅಭಿವೃದ್ದಿ ಶೂನ್ಯವಾಗಿದೆ. ರೈತರನ್ನು ವಿನಾಶದ ತಳ್ಳುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ದ ರಾಜ್ಯದ ಜನ ರೋಸಿ ಹೋಗಿದ್ದಾರೆ. ಬಿಜೆಪಿ ಸರಕಾರದ ಸಾಧನೆ ಜನ ಪತ್ತೆ ನೆನಪು ಮಾಡಿಕೊಳ್ಳುತ್ತಿದ್ದಾರೆಂದು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ