October 5, 2024

ನದಿಯಲ್ಲಿ ಈಜಲು ತೆರಳಿದ ಮೂವರು ಇಂಜಿನಿಯರ್ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ  ನಡೆದಿದೆ.

ಕೊಡಗು ಜಿಲ್ಲೆಯಲ್ಲಿ ಶನಿವಾರ ಈ ದುರ್ಘಟನೆ ನಡೆದಿದೆ.

ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಅರ್ಜಿ ಗ್ರಾಮದ ಬರಪೊಳೆಯ ಕೊಂಗಣ ನದಿಯಲ್ಲಿ ಈಜಲು ತೆರಳಿದ್ದ ಮೂವರು ಇಂಜಿನಿಯರ್  ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.

ಮೃತ ವಿದ್ಯಾರ್ಥಿಗಳನ್ನು 20 ವರ್ಷದ ರಷಿಕ್ ಕುಶಾಲಪ್ಪ, 20 ವರ್ಷದ ಆಕಾಶ್ ಬಿದ್ದಪ್ಪ ಮತ್ತು 20 ವರ್ಷದ ಸುದೀಶ್ ಅಯ್ಯಪ್ಪ ಎಂದು ಗುರುತಿಸಲಾಗಿದೆ.

ಕೊಡಗಿನ ಪೊನ್ನಂಪೇಟೆ ಸಿಇಟಿ ಕಾಲೇಜಿನಲ್ಲಿ 2ನೇ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ಐವರ ತಂಡ ವೀಕೆಂಡ್‌ ಕಾರಣಕ್ಕೆ ಕೊಂಗಣ ನದಿಯಲ್ಲಿ ಈಜಲು ತೆರಳಿದ್ದ ಈ ವೇಳೆ ಘಟನೆ ಸಂಭವಿಸಿದೆ. ನೀರಿನ ಹರಿವು ಹೆಚ್ಚಿದ್ದರಿಂದ ಮೂವರು ಕೊಚ್ಚಿ ಹೋಗಿದ್ದು ಇಬ್ಬರು ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ.

ಒಬ್ಬರನ್ನು ರಕ್ಷಿಸಲು ಒಬ್ಬರು ಪ್ರಯತ್ನಿಸಿದ್ದು…ಹೀಗೆ  ಮೂರು ಮಂದಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಪ್ರಾಣ ಉಳಿಸಿಕೊಂಡಿದ್ದಾರೆ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊನ್ನಂಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ