October 5, 2024

ಮೂಡಿಗೆರೆ ಪಟ್ಟಣದ ಹಳೇಮೂಡಿಗೆರೆ ಶ್ರೀ ಈಶ್ವರ ದೇವಸ್ಥಾನದ ಪುನರ್ ನಿರ್ಮಾಣ ಕಾರ್ಯ ಸಾಗುತ್ತಿದ್ದು, ದೇವಾಲಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕ್ಷೇತ್ರದ ವತಿಯಿಂದ ರೂ. ಎರಡು ಲಕ್ಷ ದೇಣಿಗೆ ನೀಡಿರುತ್ತಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ರಾಜ್ಯದ ವಿವಿಧ ದೇವಾಲಯಗಳ ಜೀರ್ಣೋದ್ಧಾರ ಮತ್ತು ಪುನರ್ ನಿರ್ಮಾಣ ಕಾರ್ಯಕ್ಕೆ ಆರ್ಥಿಕ ನೆರವು ಒದಗಿಸಲಾಗುತ್ತಿದೆ. ಅದರ ಅಂಗವಾಗಿ ಪುರಾತನ ದೇವಾಲಯವಾಗಿರುವ ಹಳೇಮೂಡಿಗೆರೆ ಶ್ರೀ ಈಶ್ವರ ದೇವಾಲಯಕ್ಕೆ ದೇಣಿಗೆ ನೀಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ನ ಸದಸ್ಯ ಪ್ರಶಾಂತ್ ಚಿಪ್ರಗುತ್ತಿ ಅವರು ರೂ. ಎರಡು ಲಕ್ಷದ ಡಿ.ಡಿ.ಯನ್ನು ದೇವಾಲಯದ ಸಮಿತಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅವರು ಮಾತನಾಡಿ ಹಳೇಮೂಡಿಗೆರೆ ಶ್ರೀ ಈಶ್ವರ ದೇವಾಲಯವು ಬಹಳ ಪ್ರಾಚೀನವಾದ ದೇವಾಲಯವಾಗಿದೆ. ಇದರ ಜೀರ್ಣೋದ್ಧಾರ ಕಾರ್ಯವನ್ನು ಗ್ರಾಮಸ್ಥರು ಹಮ್ಮಿಕೊಂಡಿದ್ದು, ಸಂಪೂರ್ಣ ಶಿಲಾಮಯವಾಗಿ ದೇವಾಲಯ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ದೇವಾಲಯಗಳು ತಮ್ಮ ಸಂಸ್ಕೃತಿಯ ಪ್ರತೀಕವಾಗಿವೆ. ಮಂದಿರಗಳು ಮನಸ್ಸಿಗೆ ಶಾಂತಿ, ನೆಮ್ಮದಿಯನ್ನು ಆಧ್ಯಾತ್ಮಿಕ ಚಿಂತನೆಯ ವಾತಾವರಣವನ್ನು ನೀಡುವ ಪವಿತ್ರ ತಾಣಗಳಾಗಿವೆ. ನಾಡಿನೆಲ್ಲೆಡೆ ಜನರು ತಮ್ಮ ತಮ್ಮ ಗ್ರಾಮಗಳ ದೇವಾಲಯಗಳನ್ನು ಜೀರ್ಣೋದ್ಧಾರ ಮಾಡುವ ನಿಟ್ಟಿನಲ್ಲಿ ತುಂಬಾ ಉತ್ಸುಕತೆಯಿಂದ ಕೆಲಸ ಮಾಡುತ್ತಿರುವುದು ಕಂಡು ಬರುತ್ತಿದೆ. ಜನರಲ್ಲಿ ಧರ್ಮಜಾಗೃತಿ ಮೂಡಿದ್ದು ವಿಶೇಷವಾಗಿ ಯುವಜನರು ನಮ್ಮ ಸಂಸ್ಕೃತಿ ಸಂಪ್ರದಾಯಗಳ ಕಡೆಗೆ ಆಸಕ್ತಿ ತೋರುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನಾಡಿನ ಸಾವಿರಾರು ದೇವಾಲಯಗಳ ಜೀರ್ಣೋದ್ಧಾರಕ್ಕೆ ನೆರವಿನ ಹಸ್ತ ನೀಡುತ್ತಿದ್ದಾರೆ. ಶ್ರೀ ಕ್ಷೇತ್ರವು ವಿವಿಧ ಆಯಾಮಗಳಲ್ಲಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಆರ್ಥಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ಬರುತ್ತಿದೆ. ಪೂಜ್ಯರ ದೂರದೃಷ್ಟಿ, ಸಾಮಾಜಿಕ ಕಳಕಳಿ ಅತ್ಯಂತ ಶ್ರೇಷ್ಠವಾದುದಾಗಿದೆ ಎಂದರು.

ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿಯ ಅಧ್ಯಕ್ಷ ಎಂ.ಆರ್. ಜಗದೀಶ್, ಸಮಿತಿಯ ಸದಸ್ಯರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡಿಗೆರೆ ತಾಲ್ಲೂಕು ಯೋಜನಾಧಿಕಾರಿಗಳಾದ ಶಿವಾನಂದ ಮುಂತಾದವರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ