October 5, 2024

ಮೂಡಿಗೆರೆ ಪಟ್ಟಣದಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ ಶುಕ್ರವಾರ ಬೆಳಿಗ್ಗೆ ದಿಡೀರ್ ಭೇಟಿ ನೀಡಿದರು. ಇಂದಿರಾ ಕ್ಯಾಂಟೀನ್ ವ್ಯವಸ್ಥೆಗಳ ಬಗ್ಗೆ ಅಲ್ಲಿನ ಸಿಬ್ಬಂದಿಗಳು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದರು.

ಪಟ್ಟಣ ಪಂಚಾಯಿತಿ ಸದಸ್ಯರುಗಳೊಂದಿಗೆ ಇಂದಿರಾ ಕ್ಯಾಂಟೀನ್ ಗೆ ನಯನ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕ್ಯಾಂಟೀನ್ ಗೆ ಉಪಹಾರಕ್ಕೆ ಬಂದಿದ್ದ ಸಾರ್ವಜನಿಕರನ್ನು ಮಾತನಾಡಿಸಿ ಇಂದಿರಾ ಕ್ಯಾಂಟೀನ್ ಆಹಾರದ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು.

ಅಲ್ಲಿನ ಸಿಬ್ಬಂದಿಗಳಿಗೆ ಗುಣಮಟ್ಟದ ಆಹಾರ ಪೂರೈಕೆ ಮಾಡುವಂತೆ ಸೂಚಿಸಿ ಸಾರ್ವಜನಿಕರಿಂದ ದೂರುಗಳು ಕೇಳಿಬಂದರೆ ಕ್ರಮ ವಹಿಸುವುದಾಗಿ ಸೂಚಿಸಿದರು.

ಇಂದಿರಾ ಕ್ಯಾಂಟೀನ್ ನಲ್ಲಿಯೇ ಬೆಳಗ್ಗಿನ ಉಪಹಾರ ಸೇವಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಸದಸ್ಯರುಗಳಾದ ಕೆ.ವೆಂಕಟೇಶ್, ರಮೇಶ್ ಹೊಸಕೆರೆ, ಹಮ್ಜಾ, ಮಾಜಿ ಆಧ್ಯಕ್ಷೆ ಜಯಮ್ಮ, ಮುಂಖಡರಾದ ರವಿ ಕುನ್ನಹಳ್ಳಿ, ರಘು ಮಗ್ಗಲಮಕ್ಕಿ ಮುಂತಾದವರು ಇದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ