October 5, 2024

ಹಿರಿಯ ಕಾಫಿ ಬೆಳೆಗಾರ ನಾರ್ಬಾಟ್ ಸಾಲ್ದಾನ ಅವರ ನಿಧನಕ್ಕೆ ಮೂಡಿಗೆರೆ ಬೆಳೆಗಾರರ ಸಂಘದ ಪದಾಧಿಕಾರಿಗಳು ವಿವಿಧ ಸಂಘಸಂಸ್ಥೆಗಳು, ಜನಪ್ರತಿನಿಧಿಗಳು ತಮ್ಮ  ಸಂತಾಪ ವ್ಯಕ್ತಪಡಿಸಿದ್ದಾರೆ.

ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ನಾರ್ಬಾಟ್ ಸಾಲ್ದಾನ ಅವರ ಸೇವೆಯನ್ನು ಸ್ಮರಿಸಿದ್ದಾರೆ. ಮಾನವೀಯ ಗುಣಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಸರಳವಾದ ಮತ್ತು ಪರೋಪಕಾರ ಜೀವನ ನಡೆಸಿದ್ದ ಸಾಲ್ದಾನ ಅವರು ಎಲ್ಲರ ಪ್ರೀತಿ ವಿಶ್ವಾಸ ಗೌರವಕ್ಕೆ ಪಾತ್ರರಾಗಿದ್ದರು. ಅವರು ಬೆಳೆಗಾರರ ಸಂಘದ ನಿರ್ದೇಶಕರು ಆಗಿದ್ದರು. ಬೆಳೆಗಾರರ ಸಂಘದ ಚಟುವಟಿಕೆಗಳಿಗೆ ಸದಾ ಬೆಂಬಲ ನೀಡುತ್ತಿದ್ದರು. ಎಲ್ಲರ ಕಷ್ಟಸುಖಗಳಿಗೆ ಭಾಗಿಯಾಗುತ್ತಿದ್ದರು. ಅವರ ನಿಧನ ತುಂಬಲಾರದ ನಷ್ಟವನ್ನುಂಟುಮಾಡಿದೆ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ, ವಿಧಾನಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಸೇರಿದಂತೆ ಹಲವು ಗಣ್ಯರು ಸಂಘಸಂಸ್ಥೆಗಳವರು, ರಾಜಕೀಯ ಪಕ್ಷಗಳ ಮುಖಂಡರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಬಣಕಲ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಶನಿವಾರ ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದ ತಮ್ಮ ಕಾಫಿ ಎಸ್ಟೇಟ್ ನಲ್ಲಿ ಆಕಸ್ಮಿಕವಾಗಿ ಬಿದ್ದು ಗಾಯಗೊಂಡಿದ್ದ ನಾರ್ಬಾಟ್ ಸಾಲ್ದಾನ ಅವರು ಕೊನೆಯುಸಿರೆಳೆದಿದ್ದರು.

ಅವರ ಪಾರ್ಥೀವ ಶರೀರವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಇರಿಸಿದ್ದು, ಸೋಮವಾರ ಬೆಳಿಗ್ಗೆ 8-30ರಿಂದ 10-30ರ ವರೆಗೆ ಮಂಗಳೂರಿನ ಬಲ್ಮಟ ರಸ್ತೆಯಲ್ಲಿರುವ ಸಾಲ್ದಾನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇರಿಸಿ ನಂತರ 1-30 ರಿಂದ 3-30ರ ವರೆಗೆ ಮೂಡಿಗೆರೆ ತಾಲ್ಲೂಕು ಬಣಕಲ್ ಚರ್ಚ್ ನಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗುತ್ತದೆ. ನಂತರ ಬಣಕಲ್ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ