October 5, 2024

ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದೆ. ಈ ಬಗ್ಗೆ ಪಕ್ಷ ಬುಧವಾರ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಅವರು ರಾಮ ಮಂದಿರದ ಆಹ್ವಾನವನ್ನು ತಿರಸ್ಕರಿಸಿದ್ದಾರೆ. 

ರಾಮ ಮಂದಿರ ಉದ್ಘಾಟನೆ “ಆರ್‌ಎಸ್‌ಎಸ್/ಬಿಜೆಪಿ ಕಾರ್ಯಕ್ರಮ” ಎಂದಿರುವ ಕಾಂಗ್ರೆಸ್, ಧರ್ಮವು ವೈಯಕ್ತಿಕ ವಿಷಯವಾಗಿದೆ. ಆದರೆ ಆರ್‌ಎಸ್‌ಎಸ್/ಬಿಜೆಪಿ ಅಯೋಧ್ಯೆ ಮಂದಿರವನ್ನು ರಾಜಕೀಯ ಯೋಜನೆಯಾಗಿ ಬಳಸಿಕೊಳ್ಳುತ್ತಿದೆ ಎಂದು ಹೇಳಿದೆ.

ಲೋಕಸಭೆ ಚುನಾವಣಾ ಲಾಭಕ್ಕಾಗಿ ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರು ಅಯೋಧ್ಯೆಯ ಅಪೂರ್ಣ ದೇವಾಲಯವನ್ನು ಉದ್ಘಾಟನೆ ಮಾಡಲಾಗುತ್ತಿದೆ. ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ.

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ನೀಡಲಾಗಿತ್ತು.

ಕಾಂಗ್ರೇಸ್ ಪಕ್ಷದ ಈ ನಿಲುವು ಈಗ ಬಿ.ಜೆ.ಪಿ.ಗೆ ರಾಜಕೀಯವಾಗಿ ದೊಡ್ಡ ಅಸ್ತ್ರವನ್ನು ನೀಡಿದೆ. ಕಾಂಗ್ರೇಸ್ ತೀರ್ಮಾನದ ಬಗ್ಗೆ ಬಿ.ಜೆ.ಪಿ. ನಾಯಕರು ಕಾಂಗ್ರೇಸ್ ಪಕ್ಷವನ್ನು ತೀವ್ರವಾಗಿ ಟೀಕಿಸಿದೆ. ಕಾಂಗ್ರೇಸ್ ಅಲ್ಪಸಂಖ್ಯಾತರನ್ನು ಓಲೈಸುವ ಸಲುವಾಗಿ ಹಿಂದೂ ವಿರೋಧಿ ಮನೋಭಾವನೆ ಪ್ರದರ್ಶಿಸುತ್ತಿದೆ ಎಂದು ಆರೋಪಿಸಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ