October 5, 2024

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ರೆಸಾರ್ಟ್ ವಾಸ್ತವ್ಯ ಹೂಡಿ ರಾಜಕೀಯ ತಂತ್ರಗಾರಿಕೆ ಆರಂಭಿಸಿದ್ದಾರೆ. ಚಿಕ್ಕಮಗಳೂರು ಸಮೀಪದ ಹನಿ ಡ್ಯೂ ರೆಸಾರ್ಟ್ ನಲ್ಲಿ  ಮಂಗಳವಾರದಿಂದ ಕುಮಾರಸ್ವಾಮಿ ವಾಸ್ತವ್ಯ ಹೂಡಿ ಲೋಕಸಭಾ ಚುನಾವಣೆಯ ತಂತ್ರಗಾರಿಕೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ. ಹಳೆ ಮೈಸೂರು ಭಾಗದ ಟಿಕೆಟ್ ಸೇರಿದಂತೆ ಮಂಡ್ಯದಿಂದ ಸ್ಪರ್ಧೆ ಬಗ್ಗೆ ಮುಖಂಡರ ಜೊತೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಗೆ ವಿವಿಧ ಪಕ್ಷಗಳಲ್ಲಿ ಚಟುವಟಿಕೆಗಳು ಪ್ರಾರಂಭವಾಗಿರುವ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಸಮೀಪದ ಹನಿಡ್ಯೂ ಎಂಬ ರೆಸಾರ್ಟ್ ನಲ್ಲಿ ತಮ್ಮ ಆಪ್ತರೊಂದಿಗೆ ಸಭೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಮಂಡ್ಯದಿಂದ ಬಿ.ಜೆ.ಪಿ-ಜೆ.ಡಿ.ಎಸ್. ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಕಣಕ್ಕಿಳಿಯುತ್ತಾರೆ ಎಂಬ ರಾಜಕೀಯ ಚರ್ಚೆಯ ನಡುವೆ ಕುಮಾರಸ್ವಾಮಿಯವರ ಈ ರೆಸಾರ್ಟ್ ಸಭೆ ಮಹತ್ವ ಪಡೆದಿದೆ.

ಹನಿಡ್ಯೂ ರೆಸಾರ್ಟ್ನಲ್ಲಿ ವಾಸ್ತವ್ಯ ಹೂಡಿರುವ ಕುಮಾರಸ್ವಾಮಿ, ಪಕ್ಷದ ಮುಖಂಡರುಗಳಾದ ಮಂಡ್ಯದ ಮಾಜಿ ಸಂಸದ ಪುಟ್ಟರಾಜು, ಮಾಗಡಿ ಮಾಜಿ ಶಾಸಕ ಬಾಲಕೃಷ್ಣ, ಸಾ.ರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಇತರರ ಜೊತೆ  ಸಮಾಲೋಚನೆ ನಡೆಸಿದ್ದಾರೆ.  ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯ ಮತ್ತು ಮೈಸೂರು ಲೋಕಸಭಾ ಕ್ಷೇತ್ರದ ವಿಚಾರದಲ್ಲಿ ತೆಗೆದುಕೊಳ್ಳಬೇಕಾದ ತೀರ್ಮಾನಗಳ ಕುರಿತಾಗಿಯೇ ಹೆಚ್ಚಿನ ಚರ್ಚೆ ನಡೆದಿದೆ ಎಂದು ತಿಳಿದುಬಂದಿದೆ.

ಈ ವೇಳೆ ರೆಸಾರ್ಟ್ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ, ಮಂಡ್ಯ ಜೆಡಿಎಸ್ ನ ಭದ್ರಕೋಟೆ, ಅಭ್ಯರ್ಥಿ ಯಾರಾಗಬೇಕು ಎನ್ನುವ ಕುರಿತು ಪ್ರತಿದಿನ ಚರ್ಚೆ ನಡೆಯುತ್ತಿದೆ. ನಮ್ಮ ಶಕ್ತಿಯನ್ನು ಬಿಜೆಪಿಗೆ ಧಾರೆ ಎರೆಯಲು ಸಮಾಲೋಚನೆಗಳಾಗಿವೆ. ಕಾರ್ಯಕರ್ತರು ಒಂದಾಗಬೇಕೆಂಬುದು ಕುಮಾರಸ್ವಾಮಿ ಅವರ ಆಶಯ ಎಂದರು. ಸೀಟು ಹಂಚಿಕೆ ವಿಳಂಭವಾಗಬಾರದು, ಮಂಡ್ಯ, ತುಮಕೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ನಾಯಕರು ಹಾಗೂ ಕಾರ್ಯಕರ್ತರು ಕುಮಾರಸ್ವಾಮಿಗೆ ಸ್ಪರ್ಧೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ರಾಜ್ಯ ರಾಜಕೀಯದ ಬಗ್ಗೆ ಸಂಕ್ರಾತಿಗೆ ಶುಭ ಸುದ್ದಿ ನೀಡಬಹುದು ಎಂದು ಭೋಜೇಗೌಡ ಭವಿಷ್ಯ ನುಡಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ