October 5, 2024

ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘ ಸಕಲೇಶಪುರದಲ್ಲಿ ಹಮ್ಮಿಕೊಂಡಿದ್ದ ಕಾಫಿ ವಿತ್ ಡಾಕ್ಟರ್ ಕಾರ್ಯಕ್ರಮದಲ್ಲಿ   ಅಚ್ಚನಹಳ್ಳಿ ಸುಚೇತನ ಅವರ “ಕಾಡು ಕಾಫಿ” ಕೃತಿಯನ್ನು ಬಿಡುಗಡೆ ಮಾಡಲಾಯಿತು.

ಕೃತಿಯನ್ನು  ನಾರಾಯಣ ಹೃದಯಾಲಯದ  ಖ್ಯಾತ ಹೃದಯ ತಜ್ಞರಾದ ಡಾ.ಸಿ.ಎನ್.ಮಂಜುನಾಥ್ ಅವರು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಸಿ.ಎನ್. ಮಂಜುನಾಥ್ ಅವರು ; ಕಾಫಿ ಸೇವನೆಯಿಂದ ಮಾನವ ಆರೋಗ್ಯದ ಮೇಲೆ ಆಗಲಿರುವ ಉಪಯೋಗ, ಕಾಫಿಯ ಸಂಬಂಧಗಳ ಬಗ್ಗೆ ವಿವರಿಸಿದರು. ಪ್ರತಿದಿನ ಎರಡು ಕಪ್ ಕಾಫಿ ಕುಡಿಯುವುದರಿಂದ ಹೃದಯ ಆರೋಗ್ಯ ಸುಸ್ಥಿತಿಯಲ್ಲಿಡಲು ಸಹಾಯಕ ಎಂದರು.

ಈ ಸಂದರ್ಭದಲ್ಲಿ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಹೆಚ್.ಪಿ.ಸಂದೇಶ್, ಭಾರತೀಯ ಕಾಫಿ ಮಂಡಳಿ ಅಧ್ಯಕ್ಷ ಎಂ.ಜೆ.ದಿನೇಶ್, ಕಾಫಿ ಮಂಡಳಿ ಸಿಇಒ ಡಾ.ಜಗದೀಶ್ (ಐಎಎಸ್), ಹಾಸನ ಬೆಳೆಗಾರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ, ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಡಾ.ಹೆಚ್.ಟಿ.ಮೋಹನ್ ಕುಮಾರ್, ಪ್ರಗತಿಪರ ಕೃಷಿಕರಾದ ಧರ್ಮರಾಜ್ ಉಪಸ್ಥಿತರಿದ್ದರು.

ಕಾಡು ಕಾಫಿ ಪುಸ್ತಕ ಸುಚೇತನ ಅವರ 7ನೇ ಕೃತಿಯಾಗಿದೆ. ಈ ಕೃತಿಯಲ್ಲಿ  ಇಥಿಯೋಪಿಯಾದ ಕಾಡು ಕಾಫಿಯ ಸಂಪೂರ್ಣ ಪರಿಚಯ ಸರಳವಾಗಿ ಬರೆಯಲಾಗಿದೆ. ಪುಸ್ತಕ ಪಡೆಯಲು ಬಯಸುವವರು  9482330176 ಸಂಪರ್ಕಿಸಬಹುದಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ