October 5, 2024

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದ ಚಾರ್ಮಾಡಿ ಘಾಟಿಯಲ್ಲಿ ಸೋಮನಕಾಡು ಸಮೀಪ ಟಿಪ್ಪರ್ ಲಾರಿ  2000 ಅಡಿ ಪ್ರಪಾತಕ್ಕೆ ಬಿದ್ದು ಚಾಲಕ ಅದೃಷ್ಟವಶಾತ್ ಸಾವಿನ ದವಡೆಯಿಂದ ಪಾರಾದ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ.

ಮೂಡಿಗೆರೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಟಿಪ್ಪರ್ ಚಾರ್ಮಾಡಿ ಘಾಟ್ ನಲ್ಲಿ ಮಂಜು ಕವಿದ ವಾತಾವರಣವಿದ್ದರಿಂದ ದಾರಿ ಕಾಣದೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗುದ್ದಿ ಪ್ರಪಾತಕ್ಕೆ ಉರುಳಿ ಬಿದ್ದಿದೆ.

ಉರುಳಿ ಬಿದ್ದ ರಭಸಕ್ಕೆ ಟಿಪ್ಪರ್ ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ ಚಾಲಕನಿಗೆ ಸೊಂಟಕ್ಕೆ ತುಂಬಾ ಪೆಟ್ಟಾಗಿದ್ದು ಅಂಬುಲೆನ್ಸ್ ಮೂಲಕ ಉಜಿರೆಯ ಧರ್ಮಸ್ಥಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ