October 5, 2024

ಇತ್ತೀಚಿನ ದಿನಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿರುವುದಕ್ಕೆ ಪೂರಕವಾಗಿ ರಸ್ತೆ ಅವಘಡಗಳು ಹೆಚ್ಚಾಗುತ್ತಿವೆ. ರಸ್ತೆ ಅಪಘಾತ ಮತ್ತು ಅಪಘಾತದಿಂದ ಸಾವುನೋವನ್ನು ತಪ್ಪಿಸಲು ರಸ್ತೆ ಸುರಕ್ಷತೆ ಮತ್ತು ರಸ್ತೆ ನಿಯಮ ಕಾನೂನುಗಳ ಬಗ್ಗೆ ಪ್ರತಿಯೊಬ್ಬರೂ ತಿಳುವಳಿಕೆ ಪಡೆಯುವುದು ಮುಖ್ಯ ಎಂದು ಮೂಡಿಗೆರೆ ಠಾಣೆಯ ಉಪ ಠಾಣಾಧಿಕಾರಿ ಮಂಜುನಾಥ್ ಹೇಳಿದರು.

ಅವರು ಶುಕ್ರವಾರ ಮೂಡಿಗೆರೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜೇಸಿಐ ಮೂಡಿಗೆರೆ ವತಿಯಿಂದ ಪೊಲೀಸ್ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ‘ರಾಷ್ಟ್ರೀಯ ಯುವ ದಿನ’ ದ ಅಂಗವಾಗಿ ಏರ್ಪಡಿಸಿದ್ದ ರಸ್ತೆ ಸುರಕ್ಷತೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ರಸ್ತೆ ಸುರಕ್ಷತೆ ಮತ್ತು ರಸ್ತೆ ನಿಯಮ ಉಲ್ಲಂಘನೆ ಕಾನೂನು ಅರಿವು ಇಲ್ಲದೇ ಬಹಳಷ್ಟು ಜನ ತಪ್ಪು ಮಾಡುತ್ತಿದ್ದಾರೆ. ಇದರಿಂದ ತಮ್ಮ ಪ್ರಾಣಕ್ಕೂ ಸಂಚಕಾರ ತಂದುಕೊಳ್ಳುವುದಲ್ಲದೇ ಬೇರೆಯವರ ಜೀವಕ್ಕೂ ಮಾರಕವಾಗುತ್ತಿದ್ದಾರೆ. ರಸ್ತೆ ನಿಯಮ ಮತ್ತು ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಪಠ್ಯದಲ್ಲಿ ಇದೂ ಒಂದು ಭಾಗವಾಗಬೇಕು ಆಗ ಮುಂದೆ ರಸ್ತೆ ಅಪಘಾತಗಳ ಸಂಖ್ಯೆ ಮತ್ತು ಕಾನೂನು ಉಲ್ಲಂಘನೆ ಪ್ರಮಾಣ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದು, ಸಂಘ ಸಂಸ್ಥೆಗಳು ಸಹ ಹೆಚ್ಚಿನ ಆದ್ಯತೆ ನೀಡಿ ಸಾರ್ವಜನಿಕರಿಗೆ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.

ಮೂಡಿಗೆರೆ ಜೇಸಿಐ ಪೂರ್ವಾಧ್ಯಕ್ಷ  ಮಗ್ಗಲಮಕ್ಕಿ ಗಣೇಶ್ ಮಾತನಾಡಿ ವಿದ್ಯಾರ್ಥಿಗಳು ರಸ್ತೆ ಸುರಕ್ಷತೆ ಬಗ್ಗೆ ಹಾಗೂ ಜೀವನದಲ್ಲಿ ಸಮಯಪ್ರಜ್ಞೆ ಶಿಸ್ತನ್ನು ಅಳವಡಿಸಿಕೊಳ್ಳಬೇಕು. ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಮಂಜುಳಾ ಕೆ ಇವರು ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳು ಓದಬೇಕು. ಅವರು ಯುವಜನರ ಸಾಮರ್ಥ್ಯದ ಬಗ್ಗೆ ಅಪಾರ ನಂಬಿಕೆ ಹಾಗೂ ಭರವಸೆ ವ್ಯಕ್ತಪಡಿಸಿದ್ದಾರೆ. ಯುವಜನರಲ್ಲಿ ಅದಮ್ಯವಾದ ಶಕ್ತಿ ಇದ್ದು ಅದನ್ನು ಸಕಾರಾತ್ಮಕವಾಗಿ ಬಳಸಿಕೊಂಡಾಗ ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ಎಂದರು.

ಮೂಡಿಗೆರೆ ಜೇಸಿಐ ಅಧ್ಯಕ್ಷ ಸುಪ್ರೀತ್ ಕಾರಬೈಲ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜೇಸಿಐ ಕಾರ್ಯದರ್ಶಿ ದೀಕ್ಷಿತ್ ಕಣಚೂರು, ಲೇಸಿ ಜೇಸಿ ಕಾರ್ಯದರ್ಶಿ ಶೃತಿ ದೀಕ್ಷಿತ್, ಪದಾಧಿಕಾರಿಗಳಾದ ಸುದೀಪ್ ತ್ರಿಪುರ, ಆಕಾಶ್, ಸುನಿಲ್ ಹಾಗೂ ಸದಸ್ಯರಾದ ಶ್ರೀಮತಿ ಪ್ರೇಮ ಪುಣ್ಯ ಮೂರ್ತಿ ರೋಹಿತ್ ಹೊಸಳ್ಳಿ, ಅಕ್ಷತ್ ಪಟ್ಟದೂರು, ಆರ್ಯ ಪಟೇಲ್, ದೀಕ್ಷಿತ್ ಅಬಚೂರು, ದೀಪಕ್, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ