October 5, 2024

ಕೇಂದ್ರ ಕಾಫಿ ಮಂಡಳಿ ಅಧ್ಯಕ್ಷರಾದ ಎಂ.ಜೆ. ದಿನೇಶ್ ದೇವರುಂದ ಅವರು ಜನವರಿ 17 ರಂದು ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಪಿಯೂಷ್ ಗೋಯೆಲ್ ಅವರನ್ನು ಭೇಟಿಯಾಗಿದ್ದರು.

ನವದೆಹಲಿಯಲ್ಲಿ ನಡೆದ ಬೋರ್ಡ್ ಆಫ್ ಟ್ರೇಡ್ ಸಮಾವೇಶದ ಸಂದರ್ಭದಲ್ಲಿ ದಿನೇಶ್ ಅವರು ಕೇಂದ್ರ ಸಚಿವರನ್ನು ಭೇಟಿಯಾಗಿದ್ದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರೊಂದಿಗೆ ಕಾಫಿ ಉದ್ದಿಮೆಗೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ದಿನೇಶ್ ಅವರು ವಿಚಾರವಿನಿಮಯ ಮಾಡಿಕೊಂಡರು.

ಕಾಫಿ ಬೆಳೆಗಾರರು ಮತ್ತು ಉದ್ದಿಮೆದಾರರ ಪರವಾಗಿ ಹಲವು ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದೆ ಪ್ರಸ್ತಾಪಿಸಿದ್ದಾರೆ. ಪ್ರಮುಖವಾಗಿ ಕಾಫಿ ಉದ್ದಿಮೆಗೆ ಸಂಬಂಧಿಸಿದಂತೆ ಕಾಫಿ ಮಂಡಳಿ ಅಧ್ಯಕ್ಷರ ಮಾರ್ಗದರ್ಶನದಲ್ಲಿ ರೂಪಿಸಿರುವ ಮುಂದಿನ ಹತ್ತು ವರ್ಷಗಳ ಕಾರ್ಯಯೋಜನೆಯನ್ನು ಸಚಿವರ ಮುಂದೆ ಇರಿಸಲಾಯಿತು.  ಹವಾಮಾನ ಆಧಾರಿತ ವಿಮಾ ಯೋಜನೆಗೆ ಕಾಫಿ ಬೆಳೆಯನ್ನು ಸೇರಿಸುವುದು, ಸರ್ಫೇಸಿ ಕಾಯ್ದೆಯಿಂದ ಕಾಫಿ ಮೇಲಿನ ಸಾಲವನ್ನು ಹೊರಗಿಡುವುದು ಸೇರಿದಂತೆ ವಿವಿಧ ವಿಷಯಗಳನ್ನು ಸಚಿವರ ಮುಂದೆ ಮಂಡಿಸಲಾಗಿದೆ.

ತಾವು ಪ್ರಸ್ತಾಪಿಸಿದ ವಿಷಯಗಳಿಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಎಂ.ಜೆ. ದಿನೇಶ್ ಅವರು ತಿಳಿಸಿದ್ದಾರೆ.

ಹಾಗೆಯೇ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿಗಳಾದ ಅಮರ್ ದೀಪ್ ಸಿಂಗ್ ಭಾಟೀಯಾ  ಅವರನ್ನು ಸಹ ಭೇಟಿಯಾಗಿ ಕಾಫಿ ಉದ್ದಿಮೆಯ ಸಮಸ್ಯೆಗಳನ್ನು ಮನವರಿಗೆ ಮಾಡಿಕೊಟ್ಟಿದ್ದಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ