October 5, 2024

ಮೂಡಿಗೆರೆ ಪಟ್ಟಣದಿಂದ ಚಿಕ್ಕಮಗಳೂರು, ಬೇಲೂರು, ಮಂಗಳೂರು ತೆರಳುವ ರಾಷ್ಟ್ರೀಯ ಹೆದ್ದಾರಿಯನ್ನು ಅಗಲೀಕರಣಗೊಳಿಸಬೇಕೆಂದು ಒತ್ತಾಯಿಸಿ ಜನವರಿ 24ರಂದು ವಿವಿಧ ಸಂಘಟನೆಗಳೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತಸಂಘ ಹಸಿರು ಸೇನೆ ಜಿಲ್ಲಾ ಸಂಚಾಲಕ ಡಿ.ಎಸ್.ರಮೇಶ್ ಹೇಳಿದರು.

ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೂಡಿಗೆರೆ ಮಾರ್ಗದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗಬೇಕೆಂಬುದು ತಾಲೂಕಿನ ಜನತೆಯ ಬೇಡಿಕೆಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಎಲ್ಲಾ ತಾಲೂಕಿನಲ್ಲಿ ರಸ್ತೆ ಅಗಲೀಕರಗೊಂಡಿದೆ ಆದರೆ ಮೂಡಿಗೆರೆ ಪಟ್ಟಣ ಸೇರಿದಂತೆ ಚಿಕ್ಕಮಗಳೂರು, ಬೇಲೂರು, ಮಂಗಳೂರು ಮಾರ್ಗದ ರಸ್ತೆ ಮಾತ್ರ ಅಗಲೀಕರಣಗೊಂಡಿಲ್ಲ. ರಸ್ತೆ ಕಿರಿದಾಗಿದ್ದರಿಂದ ಪ್ರತಿದಿನ ಅಪಘಾತಗಳು ಸಂಭವಿಸುತ್ತಿದ್ದು, ಸಾವು ನೋವು ಉಂಟಾಗುತ್ತಲೇ ಇದ್ದರೂ ಜನಪ್ರತಿನಿಧಿಗಳು ತಲೆ ಕೆಡಿಸಿಕೊಂಡಿಲ್ಲ  ಹಾಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಹೇಳಿದರು.

ತಾಲೂಕು ಅಧ್ಯಕ್ಷ ಡಿ.ಆರ್.ಪುಟ್ಟಸ್ವಾಮಿ ಮಾತನಾಡಿ, ಈ ಹಿಂದೆ ರಾಜ್ಯ ಮತ್ತು ಕೇಂದ್ರ ಸರಕಾರದಲ್ಲಿ ವಿವಿಧ ಉನ್ನತ ಸ್ಥಾನ ಪಡೆದಂತಹ ಮೂಡಿಗೆರೆ ತಾಲೂಕಿನ ಜನಪ್ರತಿನಿಧಿಗಳು ರಸ್ತೆ ಅಗಲೀಕರಣದ ಬಗ್ಗೆ ಕಾಳಜಿ ತೋರಿಸದ ಕಾರಣ ಅಗಲೀಕರಣ ನೆನಗುದಿಗೆ ಬಿದ್ದಿದೆ. ಹಾಗಾಗಿ ಎಲ್ಲಾ ಪ್ರಗತಿಪರ ಸಂಘಟನೆಗಳೊಂದಿಗೆ ಜ.24ರಂದು ಬೆಳಗ್ಗೆ 11 ಗಂಟೆಗೆ ಬಸ್ ನಿಲ್ದಾಣದ ಮುಂದೆ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ