October 5, 2024

ಕಳಸ ತಾಲ್ಲೂಕಿನ  ಸಂಸೆ, ಬೆಳ್ತಂಗಡಿ ತಾಲ್ಲೂಕಿನ ಎಳನೀರು, ದಿಡುಪೆ ಸಂಪರ್ಕ ರಸ್ತೆಯ ಅಭಿವೃದ್ಧಿ ಕುರಿತು ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ ಮತ್ತು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಇವರುಗಳ ಸಮ್ಮುಖದಲ್ಲಿ ಸಮಾಲೋಚನ ಸಭೆ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಕಳಸ ಭಾಗದ ಮಾಜಿ ಜಿ.ಪಂ. ಸದಸ್ಯ ಪ್ರಭಾಕರ ಗೌಡ, ಮುಖಂಡರಾದ ವಿಶ್ವನಾಥ ಗೌಡ, ರವಿ ರೈ, ಹಿತ್ಲುಮಕ್ಕಿ ರಾಜೇಂದ್ರ, ಶ್ರೇಣಿಕ್, ಬೆಳ್ತಂಗಡಿ ಭಾಗದ ಮುಖಂಡರುಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.

ಇಬ್ಬರು ಶಾಸಕರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಬುಧವಾರ ಸ್ಥಳಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು. ಕಳಸ ಮತ್ತು ಬೆಳ್ತಂಗಡಿ ತಾಲ್ಲೂಕಿನ ನಡುವಿನ ಸಂಪರ್ಕ ಅಂತರವನ್ನು ಬಹಳಷ್ಟು ಕಡಿಮೆ ಮಾಡುವ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿ ಕಾಣದೇ ನೆನೆಗುದಿಗೆ ಬಿದ್ದಿದೆ. ಈ ರಸ್ತೆಯ ಅಭಿವೃದ್ಧಿಗೆ ಹಲವು ಅಡೆತಡೆಗಳು, ಸವಾಲುಗಳು ಎದುರಾಗಿವೆ. ಮುಖ್ಯವಾಗಿ ಅರಣ್ಯ ಇಲಾಖೆಯ ಕಾನೂನುಗಳು ಅಡ್ಡಿಯಾಗುತ್ತಿವೆ. ಇದರಿಂದಾಗಿ ಈ ಭಾಗದ ಜನರ ದಶಕಗಳ ಕನಸು ಕನಸಾಗಿಯೇ ಉಳಿದಿದೆ.

ಈ ಹಿನ್ನಲೆಯಲ್ಲಿ ಇದೀಗ ಎರಡೂ ಕ್ಷೇತ್ರಗಳ ಶಾಸಕರು ಜಂಟಿಯಾಗಿ ಪ್ರಯತ್ನದಲ್ಲಿ ತೊಡಗಿದ್ದು, ರಸ್ತೆ ಕಾಮಗಾರಿಗೆ ಇರುವ ಅಡ್ಡಿ ನಿವಾರಣೆ ಆಗುವ ಬಗ್ಗೆ ಜನರಲ್ಲಿ ಭರವಸೆ ಮೂಡಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ