October 5, 2024

ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಹೋಬಳಿ ಜಿ. ಹೊಸಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು 75 ವರ್ಷಗಳನ್ನು ಪೂರೈಸಿದೆ. ಇದರ ಸವಿನೆನಪಿಗಾಗಿ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿತ್ತು.

ಜನವರಿ 25 ಮತ್ತು 26ರಂದು ಗ್ರಾಮಸ್ಥರು ಹಾಗೂ ಶಾಲೆಯ ಹಳೇವಿದ್ಯಾರ್ಥಿಗಳು ಸೇರಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಬಹು ಸಂಭ್ರಮದಿಂದ ಆಚರಿಸಿದರು.

ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಮೂಡಿಗೆರೆ ಶಾಸಕಿ ಶ್ರೀಮತಿ ನಯನ ಮೋಟಮ್ಮ ; ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯೊಂದು ಸತತ 75 ವರ್ಷಗಳ ಕಾಲ ಕಾರ್ಯನಿರ್ವಹಿಸಿ ಅಮೃತಮಹೋತ್ಸವವನ್ನು ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಶ್ಲಾಘನೀಯ. 75 ವರ್ಷಗಳ ಹಿಂದೆಯೇ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭಿಸಿರುವುದು ಅಂದಿನವರ ಶಿಕ್ಷಣ ಪ್ರೇಮಕ್ಕೆ ಸಾಕ್ಷಿಯಾಗಿದೆ. ಹಿರಿಯರು ಪ್ರಾರಂಭಿಸಿದ ಶಾಲೆಯನ್ನು ಈಗಿನ ಯುವ  ಪೀಳಿಗೆ ಪ್ರೋತ್ಸಾಹಿಸಿ ಮುನ್ನಡೆಸುತ್ತಿರುವುದು ಅಭಿನಂದನೀಯ. ಇಂದು ಸರ್ಕಾರಿ ಶಾಲೆಗಳಲ್ಲಿ ದಿನದಿಂದ ದಿನಕ್ಕೆ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಸರ್ಕಾರಗಳು ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಪೋಷಕರು ಸರ್ಕಾರಿ ಶಾಲೆಗಳ ಬಗ್ಗೆ ಆಸಕ್ತಿ ತೋರಿದರೆ ಶಾಲೆಗಳನ್ನು ಭವಿಷ್ಯದಲ್ಲಿ ಉಳಿಸಿಕೊಳ್ಳಲು ಸಾಧ್ಯ  ಎಂದರು.

ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು ಗ್ರಾಮದ 30 ಜನ ರಕ್ತ ದಾನ ಮಾಡಿರುತ್ತಾರೆ

ಶಾಲೆಯಲ್ಲಿ ಓದಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ, ಶಾಲೆಯಲ್ಲಿ ಸೇವೆ ಸಲ್ಲಿಸಿದ  ಶಿಕ್ಷಕರುಗಳನ್ನು ಗೌರವಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಸಾಂಸೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ದಿನೇಶ್, ಸದಸ್ಯರಾದ ದೀಪಕ್, ರಘು, ಸುದಾಮಣಿ, ಎಸ್.ಡಿ.ಎಂ.ಸಿ. ಅಧ್ಯಕ್ಷ   ರವಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಂಜಿತ್, ನಿವೃತ ಯೋಧ ರಮೇಶ್, ಉತ್ಸವ ಸಮಿತಿ ಅಧ್ಯಕ್ಷ ಚೇತನ್ ಆರ್ಯ,  ಗ್ರಾಮದ ಮುಖಂಡರಾದ ಹೆಚ್.ಕೆ. ಪೂರ್ಣೇಶ್, ಯೋಗೇಶ್, ಶಂಕರ್ , ರೇಣುಕಾರಾಧ್ಯ, ಆದರ್ಶ್ ಜಿ ಹನುಮನಹಳ್ಳಿ, ಕೆ.ಪಿ. ಭಾರತಿ,  ಚಂದ್ರಶೇಖರ್,  ವಕೀಲರಾದ ಆದರ್ಶ್, ಸತ್ಯ ನಾರಾಯಣ ಭಟ್ರು, ರಜತ್,  ರಾಮಚಂದ್ರ, ಮೂಡಿಗೆರೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲೆಯ ಮುಖ್ಯಶಿಕ್ಷಕರು, ಸಹಶಿಕ್ಷಕರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ