October 5, 2024

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಭಾರತ ತಂಡದ ಕ್ರಿಕೆಟಿಗ ಮತ್ತು ಕನ್ನಡಿಗ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಏರುಪೇರಾಗಿದ್ದು  ಅವರನ್ನು ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ರಣಜಿ ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕದ ತಂಡದ ನಾಯಕರಾಗಿ ಮುನ್ನಡೆಸುತ್ತಿರುವ ಮಯಾಂಕ್ ಅಗರ್ವಾಲ್ ಅವರು ತೀವ್ರ ಅಸ್ವಸ್ಥರಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ತ್ರಿಪುರಾ ವಿರುದ್ಧ ರಣಜಿ ಪಂದ್ಯವನ್ನು ಗೆದ್ದಿರುವ ಕರ್ನಾಟಕ ತಂಡವು ತನ್ನ ಮುಂದಿನ ಪಂದ್ಯವನ್ನು ಫೆಬ್ರವರಿ 2ರಿಂದ ಗುಜರಾತ್‌ನ ಸೂರತ್‌ನಲ್ಲಿ ಆಡಬೇಕಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ತಂಡವು ಮಂಗಳವಾರ ತ್ರಿಪುರಾದ ಅಗರ್ತಲಾದಿಂದ ವಿಮಾನದಲ್ಲಿ ಪ್ರಯಾಣ ಬೆಳೆಸಿತ್ತು. ವಿಮಾನದಲ್ಲಿ ವಾಪಸ್ ಆಗುತ್ತಿದ್ದಾಗ ತೀವ್ರವಾಗಿ ಅಸ್ವಸ್ಥರಾಗಿದ್ದು, ಪ್ರಯಾಣದ ವೇಳೆ ಮಯಾಂಕ್ ಅಗರ್ವಾಲ್ ಅವರು ವಿಮಾನದಲ್ಲಿದ್ದ ಬಾಟಲಿಯಿಂದ ನೀರು ಕುಡಿದಿದ್ದಾರೆ.

ತಕ್ಷಣವೇ ಅವರಿಗೆ ಅಸ್ವಸ್ಥತೆ ಕಾಡಲಾರಂಭಿಸಿದೆ. ಬಾಯಿ ಮತ್ತು ಗಂಟಲಿನಲ್ಲಿ ವಿಪರೀತ ಉರಿಯುಂಟಾಗಿದ್ದು, ನೀರು ಕುಡಿಯುತ್ತಿದ್ದಂತೆ ಅವರ ಗಂಟಲಿನಲ್ಲಿ ಉರಿ ಶುರುವಾಗಿದೆ. ಬಾಯಿ ಮತ್ತು ನಾಲಿಗೆಗೆ ಕೂಡ ಸುಟ್ಟಂತ ಅನುಭವಾಗಿದೆ. ಅವರಿಗೆ ಮಾತನಾಡಲು ಸಾಧ್ಯವಾಗಿಲ್ಲ. ತೀವ್ರ ಅಸ್ವಸ್ಥಗೊಂಡ ಅವರನ್ನು ಕೂಡಲೇ ಅಗರ್ತಲಾದ ಎಎಲ್ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಗಳ ಪ್ರಕಾರ, ಸ್ಟೋರೇಜ್ ಏರಿಯಾದಲ್ಲಿ ವಿಮಾನದ ಸಿಬ್ಬಂದಿಯು ವಾಟರ್ ಬಾಟಲ್‌ನಲ್ಲಿ ಶೌಚಾಲಯ ಸ್ವಚ್ಚಗೊಳಿಸುವ ಆ್ಯಸಿಡ್ ಇಟ್ಟಿದ್ದರು ಎನ್ನಲಾಗಿದೆ. ಮಯಾಂಕ್ ಅಗರ್ವಾಲ್ ಅವರು ನೀರೆಂದು ತಪ್ಪಾಗಿ ಭಾವಿಸಿ ಆ್ಯಸಿಡ್ ಕುಡಿದಿದ್ದಾರೆ. ಆ್ಯಸಿಡ್ ಕುಡಿದ ಮರುಕ್ಷಣವೇ ಅವರು ಎಲ್ಲವನ್ನು ಉಗುಳಿದ್ದಾರೆ. ಹಾಗಾಗಿ ಆ್ಯಸಿಡ್ ಅವರ ಹೊಟ್ಟೆಯನ್ನು ತಲುಪಿರುವ ಸಾಧ್ಯತೆ ಕ್ಷೀಣವಾಗಿದೆ. ವೈದ್ಯರು ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿದ್ದಾರೆ.

ಪ್ರಾಣಾಪಾಯದಿಂದ ಪಾರು : ಆಸ್ಪತ್ರೆಯಿಂದ ಹೇಳಿಕೆ ಬಿಡುಗಡೆ

ವಿಮಾನದಲ್ಲಿ ಶೌಚಾಲಯ ಸ್ವಚ್ಛತೆಗೆ ಬಳಕೆ ಮಾಡುವ ರಾಸಾಯನಿಕವನ್ನು ನೀರೆಂದು ಕುಡಿದು ಆಸ್ಪತ್ರೆಗೆ ದಾಖಲಾಗಿದ್ದ ಭಾರತ ತಂಡದ ಕ್ರಿಕೆಟಿಗ ಹಾಗೂ ಕನ್ನಡಿಗ ಮಯಾಂಕ್ ಅಗರ್ವಾಲ್ ಆರೋಗ್ಯದ ಕುರಿತು ಆಸ್ಪತ್ರೆ ಆಡಳಿತ ಮಂಡಳಿ ಮಹತ್ವದ ಹೇಳಿಕೆ ಬಿಡುಗಡೆ ಮಾಡಿದೆ.

ಮಯಾಂಕ್ ಅಗರ್ವಾಲ್   ಅವರು ತೀವ್ರ ಅಸ್ವಸ್ಥರಾಗಿದ್ದು ಅವರಿಗೆ ಅಗರ್ತಲಾದ ಐಎಲ್‌ಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಆಸ್ಪತ್ರೆಯ ಆಡಳಿತ ಮಂಡಳಿ ಅವರ ಆರೋಗ್ಯದ ಕುರಿತು ಬುಲೆಟಿನ್ ಬಿಡುಗಡೆ ಮಾಡಿದ್ದು, “ಮಯಾಂಕ್ ಅಗರ್ವಾಲ್ ಅವರ ಆರೋಗ್ಯ ಪ್ರಾಯೋಗಿಕವಾಗಿ ಸ್ಥಿರವಾಗಿದ್ದು, ನಿರಂತರವಾಗಿ ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ” ಎಂದು ಹೇಳಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ