October 5, 2024

ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ   ಎಂಬ ಹೇಳಿಕೆ ನೀಡಿದ್ದ ಸಚಿವ ಸತೀಶ್‌ ಜಾರಕಿಹೊಳಿ   ಸಂಕಷ್ಟ ಎದುರಾಗಿದ್ದು, ಈ ಸಂಬಂಧ ಕ್ರಿಮಿನಲ್ ಮೊಕದ್ದಮೆ   ದಾಖಲು ಮಾಡಲು ಜನಪ್ರತಿನಿಧಿಗಳ ನ್ಯಾಯಾಲಯ   ಒಪ್ಪಿಗೆ ಸೂಚಿಸಿ ಆದೇಶ ಹೊರಡಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ 2022ರ ನವೆಂಬರ್ 6ರಂದು ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಅವರು, ಹಿಂದು ಹಾಗೂ ಹಿಂದುತ್ವದ ಪದದ ಬಗ್ಗೆ ಮಾತನಾಡಿದ್ದರು. ಹಿಂದು ಪದಕ್ಕೆ ಅಶ್ಲೀಲ ಎಂಬ ಅರ್ಥವಿದೆ ಎಂದು ಹೇಳಿದ್ದರು. ಇದರ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಟೀಕೆ, ಆಕ್ರೋಶಗಳು ವ್ಯಕ್ತವಾಗಿದ್ದವು.

ಈ ಸಂಬಂಧ ಬಿಜೆಪಿ ನಾಯಕರು, ಹಿಂದು ಕಾರ್ಯಕರ್ತರು, ರಾಜ್ಯದ ಹಲವು ಕಡೆ ಸತೀಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು. ವಕೀಲ ದಿಲೀಪ್‌ ಕುಮಾರ್ ಅವರು ಕೋರ್ಟ್‌ ಮೊರೆ ಹೋಗಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯವು ಈಗ ಸತೀಶ್‌ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆದೇಶ ನೀಡಿದೆ. ನ್ಯಾಯಾದೀಶೆ ಜೆ ಪ್ರೀತ್ ಅವರಿಂದ ಆದೇಶ ನೀಡಲಾಗಿದೆ. ಹೀಗಾಗಿ ಸತೀಶ್‌ ಜಾರಕಿಹೊಳಿಗೆ ಈಗ ಸಂಕಷ್ಟ ಎದುರಾಗಿದೆ.

ಜಾರಕಿಹೊಳಿ ಏನು ಹೇಳಿದ್ದರು?
ಬೆಳಗಾವಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ ಅವರು ಹಿಂದು ಹಾಗೂ ಹಿಂದುತ್ವದ ಪದದ ಬಗ್ಗೆ ಮಾತನಾಡಿದ್ದರು. ‘ಹಿಂದು ಎಂಬ ಪದ ಆಶ್ಲೀಲ, ಕೊಳಕು ಎಂಬ ಅರ್ಥ ನೀಡುತ್ತದೆ. ಹಿಂದುತ್ವ ಎಂಬುದು ಪರ್ಷಿಯನ್ ಪದವಾಗಿದ್ದು, ಅದಕ್ಕೂ ಭಾರತಕ್ಕೂ ಏನು ಸಂಬಂಧ ಹೇಳಿ? ನಾವು ಹಿಂದೂಗಳು ಎಂದು ಬೀಗುವ ಯುವಕರು ಗೂಗಲ್, ವಿಕಿಪೀಡಿಯಾದಲ್ಲಿ ಹಿಂದೂ ಎಂಬ ಪದದ ಅರ್ಥ ತಿಳಿದುಕೊಳ್ಳಲು ಪ್ರಯತ್ನಿಸಬೇಕು. ಆ ಪದದನಿಜವಾದ ಅರ್ಥ ಗೊತ್ತಾದಾಗ, ಅವರಿಗೆ ಹಿಂದುತ್ವ ನಮ್ಮದಲ್ಲ ಎಂದು ತಿಳಿಯುತ್ತದೆ. ಆಗ ಅದನ್ನು ಪೂಜ್ಯನೀಯ ಭಾವದಿಂದ ನೋಡುವುದನ್ನು ಬಿಡುತ್ತಾರೆ ಎಂದು ಹೇಳಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ