October 5, 2024

ಮೂಡಿಗೆರೆ ಪಟ್ಟಣದ ಬಿ ಜಿ ಎಸ್, ವಿ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ “ಯಶಸ್ಸಿನತ್ತ ಹೆಜ್ಜೆ,” ವಿಧ್ಯಾರ್ಥಿ ಪರೀಕ್ಷಾ ಮಾರ್ಗದರ್ಶಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.   ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಶ್ರೀಮತಿ ಮೈನಾ ಶೇಷಾದ್ರಿ ಯವರು ವಿದ್ಯಾರ್ಥಿಗಳಿಗೆ  ಪರೀಕ್ಷೆಯನ್ನು ಎದುರಿಸುವ  ಬಗ್ಗೆ ಹಾಗೂ ವಿದ್ಯಾರ್ಥಿಗಳಿಗೆ ಯಶಸ್ಸನ್ನು ಪಡೆಯುವ ಕುರಿತು ಮಾರ್ಗದರ್ಶನ ನೀಡಿದರು. ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಬೇಕು. ಯಾವುದೇ ಆತಂಕಕ್ಕೆ ಅವಕಾಶ ನೀಡದೇ ನಿರಾಳವಾದ ಮನಸ್ಸಿನಿಂದ ಪರೀಕ್ಷೆಗೆ ತೆರಳಬೇಕು. ಸಮಯಕ್ಕೆ ಮಹತ್ವವನ್ನು ನೀಡಿದರೆ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಬಹುದಾಗಿದೆ ಎಂದರು. ಇದರೊಂದಿಗೆ ವಿದ್ಯಾರ್ಥಿಗಳಿಗೆ ಓದುವ ಹಾಗೂ ಭವಿಷ್ಯದ ಉದ್ಯೋಗ  ಅವಕಾಶಗಳ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ ಜಿ ಎಸ್ ವಿ ಎಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ  ಸಂದೇಶ್ ಎಂ ಆರ್ ಇವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಬಿ ಜಿ ಎಸ್ ವಿ ಎಸ್ ಶಾಲೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಸ್ಮಿತಾ, ಎಸ್ ಎಲ್ ಆರ್ ಜಿ ಪ್ರೌಡ ಶಾಲೆ ಜಾವಳಿಯ ಪ್ರಾಂಶುಪಾಲರಾದ  ಸುರೇಶ್ ಹಾಗೂ ಶಿಕ್ಷಕರಾದ ಸಾಗರ್ ಹಾಗೂ ಯೋಗೇಶ್ ಉಪಸ್ಥಿತರಿದ್ದರು. ಇದರೊಂದಿಗೆ ಕಾಲೇಜಿನ ಉಪನ್ಯಾಸ ವರ್ಗ ಹಾಗೂ ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ