October 5, 2024

ಎಲೆ ಮರೆಯ ಕಾಯಿಯಂತೆ ಸಾಹಿತ್ಯ ಕೃಷಿಯಲ್ಲಿ ತೊಡಗಿರುವವರನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಸಮಾಜದಲ್ಲಿ ಸಾಹಿತಿಗಳ ಸಂಖ್ಯೆ ವೃದ್ಧಿಸುತ್ತದೆ ಎಂದು ಸಾಹಿತಿ ಪ್ರೊಫೆಸರ್ ಬಿ ತಿಪ್ಪೇರುದ್ರಪ್ಪ ಸಲಹೆ ಮಾಡಿದರು

ಕಡೂರು ತಾಲೂಕಿನ ಸಿಂಗಟಗೆರೆಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನದಿಂದ ನೀಡಲಾಗುವ ಕುಂಭಕ ಸಾಹಿತ್ಯ ಸಿರಿ ಪ್ರಶಸ್ತಿಯನ್ನು ಯುವ ಲೇಖಕ ಸಿಂಗಟಗೆರೆ ಶಶಿ ಅವರಿಗೆ ಪ್ರಧಾನ ಮಾಡಿ ಅವರು ಮಾತನಾಡಿದರು

ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ಪ್ರತಿಭೆಗಳಿವೆ ಬಹಳಷ್ಟು ಜನ ಸಾಹಿತ್ಯ ಕೃಷಿಯಲ್ಲಿ ತೊಡಗಿದ್ದಾರೆ. ಎಲೆ ಮರೆಯ ಕಾಯಿಯಂತೆ ಬದುಕುತ್ತಿರುವ  ಅವರನ್ನು ಗುರುತಿಸಿ ಪ್ರೋತ್ಸಾಹಿಸುವವರಿಲ್ಲದೆ ಅವರ ಪ್ರತಿಭೆ ಕಮರಿ ಹೋಗುತ್ತಿವೆ ಎಂದು ವಿಷಾದಿಸಿದರು

ಅಂತಹವರನ್ನು ಗುರುತಿಸಿ ಬೆನ್ನು ತಟ್ಟಿ ಪ್ರೋತ್ಸಾಹಿಸಿದರೆ ಸಾಹಿತ್ಯ ಕೃಷಿ ಮಾಡಲು ಅವರಿಗೆ ಇನ್ನಷ್ಟು ಹುಮ್ಮಸ್ಸು ಬರುತ್ತದೆ ಸಮಾಜದಲ್ಲಿ ಸಾಹಿತ್ಯ ಸಾಹಿತಿಗಳ ಸಂಖ್ಯೆ ಹೆಚ್ಚುತ್ತದೆ ಎಂದು ತಿಳಿಸಿದರು

ಸಾಹಿತ್ಯ ಮನಸ್ಸಿಗೆ ಮುದ ನೀಡುತ್ತದೆ ಸುಸಂಸ್ಕೃತ ಸಭ್ಯ ಸಮಾಜವನ್ನು ನಿರ್ಮಾಣ ಮಾಡುತ್ತದೆ ನಮ್ಮ ಜ್ಞಾನವನ್ನು ಬೆಳೆಸುತ್ತದೆ ಎಂದರು

ಇತ್ತೀಚಿನ ವರ್ಷಗಳಲ್ಲಿ ಮೊಬೈಲ್ ಕಂಪ್ಯೂಟರ್ ವಾಟ್ಸಾಪ್ ಫೇಸ್ಬುಕ್ ಗೀಳಿನಿಂದಾಗಿ ಓದುವ ಪ್ರವೃತ್ತಿ ನಶಿಸುತ್ತಿದೆ ಮಕ್ಕಳು ಅವುಗಳಿಂದ ದೂರವಿದ್ದು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು

ನಮ್ಮ ಮಕ್ಕಳು ಭತ್ತ ತುಂಬುವ ಚೀಲಗಳಾಗಬಾರದು ಬಟ್ಟ ಬೆಳೆಯುವ ಗದ್ದೆಗಳಾಗಬೇಕು ಹಾಗಾಗಬೇಕಾದರೆ ಶಿಕ್ಷಕರು ಮತ್ತು ಪೋಷಕರು ಅವರಿಗೆ ಬದುಕಿನ ಮೌಲ್ಯಗಳು ಕಲಿಸಬೇಕು ಎಂದು ಸಲಹೆ ಮಾಡಿದರು

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮದ ಶ್ರೀ ಕಲ್ಲೇಶ್ವರ ಸ್ವಾಮಿ ದೇವಾಲಯದ ಅಭಿವೃದ್ಧಿ ಸಮಿತಿ  ಧರ್ಮದರ್ಶಿ ಬಿ ಕೆ ನಾಗರಾಜಪ್ಪ ಗ್ರಾಮದ ಯುವಕ ಸಿಂಗಟಗೆರೆ ಶಶಿ ಅವರಿಗೆ ಪ್ರಶಸ್ತಿ ಬಂದಿರುವುದು ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದೆ ಎಂದರು

ಪ್ರಾಸ್ತಾವಿಕವಾಗಿ ಮಾತನಾಡಿದ ಸಿರಿಗನ್ನಡ ವೇದಿಕೆಯ ಜಿಲ್ಲಾಧ್ಯಕ್ಷ ಎಂ ಆರ್ ಪ್ರಕಾಶ್ ಎಲೆಮರೆಯ ಕಾಯಿಯಂತೆ ಸಾಹಿತ್ಯ ಕೃಷಿ ಮಾಡುತ್ತಿರುವ ಸಿಂಗಟಗೆರೆ ಶಶಿ ಅವರಿಗೆ ಪ್ರಶಸ್ತಿ ಬಂದಿರುವುದು ಅರ್ಥಪೂರ್ಣವಾಗಿದೆ ಎಂದು ತಿಳಿಸಿದರು

ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಕುಂದೂರು ಅಶೋಕ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು

ಎದೆ ಮರೆಯ ಕಾಯಿಯಂತೆ ಸಾಹಿತ್ಯ ಕೃಷಿಯಲ್ಲಿ ತೊಡಗಿರುವ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಪ್ರೋತ್ಸಾಹಿಸುವ ಕೆಲಸವನ್ನು ಪ್ರತಿಷ್ಠಾನ ಕಳೆದ ಹತ್ತು ವರ್ಷಗಳಿಂದ ನಿರಂತರವಾಗಿ ಮಾಡುತ್ತಿದೆ ಎಂದು ತಿಳಿಸಿದರು

ಯುವ ಲೇಖಕ ಸಿಂಘಟಗೆರೆ ಶಶಿಯವರಿಗೆ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಮಾರಂಭದಲ್ಲಿ ಕುಂಭಕ ಸಾಹಿತ್ಯ ಸಿರಿ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಲಾಯಿತು ಇದೇ ವೇಳೆ ವಿವಿಧ ಸಂಘಟನೆಗಳ ಮುಖಂಡರು ಶಶಿ ಅವರನ್ನು ಅಭಿನಂದಿಸಿದರು

ಸಮಾರಂಭದ ನಡುವೆ ಶಿಕ್ಷಕ ಬಿ ಡಿ ಚಂದ್ರ ಶೆಟ್ಟಿ ಸಿಂಗಟಗೆರೆ ಕಲ್ಲೇಶಪ್ಪ ಮಲ್ಲೇನಹಳ್ಳಿ ನಾಗರಾಜ್ ಅವರಿಂದ ಗೀತ ಗಾಯನ ನಡೆಯಿತು

ಕಡೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷ ವೈಎಸ್ ರವಿಪ್ರಕಾಶ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಲಲಿತಮ್ಮ ಕಲ್ಲೇಶಪ್ಪ ಬಿಪಿ ದೇವಾನಂದ್ ರಾಜಾ ನಾಯಕ್ ಗಂಗಾಧರ್  ಕೆ ವಿರೂಪಾಕ್ಷಪ್ಪ ಸಿಂಗಟಗೆರೆ ರವಿ ಉಪಸ್ಥಿತರಿದ್ದರು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ