October 5, 2024

ರಾಜ್ಯದ ಬರಪೀಡಿತ ಪ್ರದೇಶಗಳ ರೈತರಿಗೆ ಪರಿಹಾರವಾಗಿ 628 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ  ಘೋಷಿಸಿದ್ದಾರೆ. ಮೊದಲ ಕಂತಿನಲ್ಲಿ ಪ್ರತಿ ಸಂತ್ರಸ್ತ ರೈತರ ಬ್ಯಾಂಕ್ ಖಾತೆಗೆ  ರೂ,2,000 ಜಮೆ ಮಾಡಲಾಗಿದೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬೈರೇಗೌಡ, 33 ಲಕ್ಷ ರೈತರಿಗೆ ಭಾಗಶಃ ಪರಿಹಾರ ಬಿಡುಗಡೆ ಮಾಡಿದ್ದು, 1.6 ಲಕ್ಷ ರೈತರ ಬ್ಯಾಂಕ್ ಖಾತೆಗಳನ್ನು ಸರಳೀಕರಿಸುವ ಪ್ರಕ್ರಿಯೆ ನಡೆಯುತ್ತಿದೆ. ಅದು ಮುಗಿದ ನಂತರ ಈ ರೈತರಿಗೂ ಸರ್ಕಾರ ಹಣ ಬಿಡುಗಡೆ ಮಾಡಲಿದೆ ಎಂದರು.

ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆ ತರಲು ಎಲ್ಲ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಹಣ ಪಡೆದ ರೈತರ ಪಟ್ಟಿಯನ್ನು ಬಹಿರಂಗಗೊಳಿಸುವಂತೆ ಸೂಚಿಸಲಾಗಿದೆ. ಯಾವುದೇ ಹೆಸರು ಸೇರ್ಪಡೆಯಾಗದ ರೈತರು ಇದ್ದಲ್ಲಿ ರೈತ ಸಂಪರ್ಕ ಕೇಂದ್ರ ಅಥವಾ ಸ್ಥಳೀಯ ಕಂದಾಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಚಿವರು ತಿಳಿಸಿದರು.

ಈಗಾಗಲೇ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು,  ಕುಡಿಯುವ ನೀರು ಮತ್ತು ಮೇವು ಪೂರೈಸಲು ಸರ್ಕಾರ ಈಗಾಗಲೇ 870 ಕೋಟಿ ರೂ. ಬಿಡುಗಡೆ ಮಾಡಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಈ ಪ್ರತಿಯೊಂದು ತಾಲೂಕಿನಲ್ಲಿ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಪಡೆಯನ್ನು ರಚಿಸಲಾಗಿದೆ. ಸಭೆ ನಡೆಸಿ, ಹಲವೆಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.

18,178 ಕೋಟಿ ಪರಿಹಾರ ಕೋರಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ನಾಲ್ಕು ತಿಂಗಳು ಕಳೆದರೂ ಹಣ ನೀಡಿಲ್ಲ, ಕೇಂದ್ರ ಸರ್ಕಾರ ಹಣನೀಡಿದರೆ ರೈತ ಸಮುದಾಯಕ್ಕೆ ಅನುಕೂಲವಾಗುತ್ತದೆ ಎಂದು ಸಚಿವರು ಹೇಳಿದರು. 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ