October 5, 2024

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಫೆಬ್ರವರಿ 26 ಮತ್ತು 27 ರಂದು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಜಿಲ್ಲೆಯ ಎಲ್ಲ ಉದ್ಯೋಗಕಾಂಕ್ಷಿ ಭಾಗವಹಿಸಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗೋಪಾಲಕೃಷ್ಣ ಅವರು ಕರೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ  ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉದ್ಯೋಗ ಮೇಳಕ್ಕೆ ಜಿಲ್ಲೆಯಲ್ಲಿರುವ ಉದ್ಯೋಗಾಕಾಂಕ್ಷಿಗಳನ್ನು ಹೆಚ್ಚಿನ ರೀತಿಯಲ್ಲಿ ಸಜ್ಜುಗೊಳಿಸಲು ಇಲಾಖೆಯಿಂದ ಸೃಜನ ಮಾಡಿರುವ ಸ್ಕಿಲ್ ಕನೆಕ್ಟ್ ಪೋರ್ಟಲ್ ಮುಖಾಂತರ ನೋಂದಣಿ ಮಾಡಿಸಬೇಕಾಗುತ್ತದೆ ಎಂದ ಅವರು. ಸದರಿ ಉದ್ಯೋಗ ಮೇಳವು ಸಂಪೂರ್ಣವಾಗಿ ಡಿಜಿಟಲೀಕರಣ ಆಗಿರುವ ಕಾರಣ ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಉದ್ಯೋಗ ವಿನಿಮಯ ಕಛೇರಿ ಹಾಗೂ ವಿವಿಧ ಸೇವಾ ವಲಯಗಳ ಉದ್ಯೋಗದಾತರನ್ನು ನೋಂದಣಿ ಮಾಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದರು

ಈ ಉದ್ಯೋಗ ಮೇಳದಲ್ಲಿ ಎಲ್ಲ ರೀತಿಯ ವಿದ್ಯಾರ್ಹತೆ ಹೊಂದಿರವರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಹಾಗೂ ಪದವಿ ಪೂರೈಸಿದ ನಂತರ ಕೌಶಲ್ಯ ತರಬೇತಿ ಪಡೆಯಲು ಅನುಕೂಲವಾಗಲಿದೆ ಎಂದರು.

ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಸ್ವ ಸಹಾಯ ಸಂಘಗಳು ಸರ್ಕಾರಿ ಕಛೇರಿ ಎಲ್ಲ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ ಮತ್ತು ಸಮುದಾಯದ ಸಂಪನ್ಮೂಲ ವ್ಯಕ್ತಿಗಳು ಶಾಲಾ ಕಾಲೇಜ್, ಅಂಗನವಾಡಿ, ಆಶಾ ಕಾರ್ಯಕರ್ತೆಯರ ಮೂಲಕ ಪ್ರಚಾರ ಕೈಗೊಂಡು ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಯಶಸ್ವಿಯಾಗಲು ಎಲ್ಲ ಇಲಾಖೆಗಳ ಅಧಿಕಾರಿಗಳು ನಿಗಾ ವಹಿಸಿ ತಮ್ಮ ಕರ್ತವ್ಯಗಳನ್ನು ಮಾಡಬೇಕು ಎಂದು ಹೇಳಿದರು.

ಬಿ.ಸಿ.ಎಂ. ಉಪನಿರ್ದೇಶಕರಾದ ಎಸ್.ಟಿ. ಸೋಮಶೇಖರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಶಾಲಾ ಕಾಲೇಜ್ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಶಾಂತ್ ಅವರು ಯುವ ಸಮೃದ್ಧಿ ಮೇಳದ ಮಾಹಿತಿಯನ್ನು ಸಭೆಯಲ್ಲಿ ತಿಳಿಸಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ