October 5, 2024

ಬಸವಣ್ಣನವರ ವಿಚಾರಧಾರೆಗಳು ಎಂದೆಂದಿಗೂ ಪ್ರಸ್ತುತವಾಗಿದ್ದು, ಅವರ ವಚನಗಳಲ್ಲಿ ಹೇಳಿರುವ ಅಂಶಗಳನ್ನು ಅಳವಡಿಸಿಕೊಂಡರೆ ಬದುಕು ಬಹಳ ಸರಳ ಮತ್ತು ಸುಂದರವಾಗುತ್ತದೆ ಎಂದು ಮೂಡಿಗೆರೆ ತಹಸೀಲ್ದಾರ್ ಶೈಲೇಶ್ ಎಸ್. ಪರಮಾನಂದ ಹೇಳಿದರು.

ಅವರು ಶನಿವಾರ ಮೂಡಿಗೆರೆ ತಾಲ್ಲೂಕು ಕಛೇರಿಯಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸರ್ಕಾರ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಗೌರವ ನೀಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಬೇಕೆಂದು ಆದೇಶ ಹೊರಡಿಸಿದೆ. ಅದರಂತೆ ಇಂದು ಮೂಡಿಗೆರೆ ತಾಲ್ಲೂಕು ಕಛೇರಿಯಲ್ಲಿ ಭಾವಚಿತ್ರ ಅನಾವರಣ ಮಾಡಲಾಗಿದೆ. ಹಾಗೆಯೇ ತಾಲ್ಲೂಕಿನ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಲು ಕ್ರಮ ವಹಿಸಲಾಗುವುದು ಎಂದರು.

ಬಸವಣ್ಣನವರ ಕುರಿತು ಉಪನ್ಯಾಸ ನೀಡಿದ ಸಿರಿಗನ್ನಡ ವೇದಿಕೆಯ ತಾಲ್ಲೂಕು ಅಧ್ಯಕ್ಷ ಪೂರ್ಣೇಶ್ ಮೂರ್ತಿ ಮಾತನಾಡಿ ; ಬಸವಣ್ಣನವರು 12ನೇ ಶತಮಾನದಲ್ಲಿ ಸಮಾಜದಲ್ಲಿ ಇದ್ದ ಕಂದಾಚಾರ, ಮೇಳುಕೀಳು ಭಾವನೆಗಳನ್ನು ಕಂಡು ಬೇಸತ್ತು ತಮ್ಮದೇ ಆದ ಹೊಸ ಮಾರ್ಗವನ್ನು ಕಂಡುಕೊಂಡರು. ಕೂಡಲಸಂಗಮದಲ್ಲಿ ಅವರು ದೊಡ್ಡ ಸಾಂಸ್ಕೃತಿಕ ಕ್ರಾಂತಿ ನಡೆಸಿದರು. ವಚನ ಸಾಹಿತ್ಯ ಮೂಲಕ ಸಮಾಜಕ್ಕೆ ಹೊಸ ಬೆಳಕು ಹರಿಸಿದರು ಎಂದರು.

ಮುಖ್ಯ ಅತಿಥಿಯಾಗಿದ್ದ ಪತ್ರಕರ್ತ ಪ್ರಸನ್ನ ಗೌಡಹಳ್ಳಿ ಮಾತನಾಡಿ ; ಬಸವಣ್ಣನವರು ಕಾಯಕವೇ ಕೈಲಾಸ, ದೇಹವೇ ದೇಗುಲ, ದಯೆಯೇ ಧರ್ಮದ ಮೂಲ ಎಂಬ ಉದಾತ್ತ ತತ್ವಗಳನ್ನು ಸರಳ ಭಾಷೆಯಲ್ಲಿ ಹೇಳಿದರು. ಸರ್ಕಾರಿ ಕಛೇರಿಗಳಲ್ಲಿ ಅವರ ಭಾವಚಿತ್ರ ಅಳವಡಿಸಿದರೇ ಮಾತ್ರ ಸಾಲುವುದಿಲ್ಲ. ಕಛೇರಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳು ಮತ್ತು ನೌಕರರು ಬಸವಣ್ಣನವರ ತತ್ವಗಳನ್ನು ಅಳವಡಿಸಿಕೊಂಡು ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿದಾಗ ಮಾತ್ರ ಅವರಿಗೆ ಗೌರವ ನೀಡದಂತಾಗುತ್ತದೆ ಎಂದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ದಯಾವತಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಚೆನ್ನಕೇಶವ, ಸಿರಸ್ತೇದಾರ್ ಕುಮಾರ್, ಶಿಕ್ಷಣ ಇಲಾಖೆಯ ಶ್ರೀನಿವಾಸ್, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ