October 5, 2024

ಹಾಸನ ಜಿಲ್ಲೆಯ ಬೇಲೂರು ಭಾಗದಲ್ಲಿ ದಾಂಧಲೆ ಎಬ್ಬಿಸಿದ್ದ ಮಕ್ನಾ ಎಂಬ ಆನೆಯನ್ನು ಸೆರೆ ಹಿಡಿದು ಬಂಡೀಪುರ ಕಾಡಿಗೆ ಸೇರಿಸಲಾಗಿತ್ತು. ರೇಡಿಯ ಕಾಲರ್‌ ಅಳವಡಿಸಿದ್ದ ಆನೆ ವಯನಾಡಿನ ಮೂಲಕ ಕೇರಳ ಪ್ರವೇಶ ಮಾಡಿ ಅಲ್ಲಿ ಅನಾಹುತ ಮಾಡಿದೆ. ಅಜೀಶ್‌ ಎಂಬವರನ್ನು ಕೊಂದು ಹಾಕಿ ಮರಳಿ ಕರ್ನಾಟಕದ ಗಡಿ ದಾಟಿ ಬಂದಿದೆ. ಅಜೀಶ್ ಅವರ ಸಾವಿನ ಬಗ್ಗೆ ಮತ್ತು ಕೆಲವೇ ದಿನಗಳಲ್ಲಿ ಮೂರು ಮಂದಿ ಕಾಡಾನೆ ದಾಳಿಗೆ ಬಲಿಯಾದ ಹಿನ್ನಲೆಯಲ್ಲಿ ವಯನಾಡಿನಲ್ಲಿ ಸಾರ್ವಜನಿಕರು ಬೃಹತ್ ಪ್ರತಿಭಟನೆ ನಡೆಸಿದ್ದರು.   ವಯನಾಡು ಸಂಸದ ರಾಹುಲ್‌ ಗಾಂಧಿ ಅವರ ಮನವಿಯನ್ನು ಮುಂದಿಟ್ಟುಕೊಂಡು ಕರ್ನಾಟಕ ಸರ್ಕಾರ 15 ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು.

ಈ ಕುರಿತು ಹೇಳಿಕೆ ನೀಡಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆನೆ ದಾಳಿಯಿಂದ ಮೃತಪಟ್ಟ ಕರ್ನಾಟಕದ ಜನರಿಗೆ ನೀಡುವ ಪರಿಹಾರಕ್ಕೆ ಸಮನಾದ ಪರಿಹಾರವನ್ನು ನೀಡಲು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ.

2023ರ ನವೆಂಬರ್ 30ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಉಪಟಳ ನೀಡುತ್ತಿದ್ದ ಮಕ್ನಾ ಕಾಡಾನೆಯನ್ನು ಸೆರೆಹಿಡಿದು ಬಂಡೀಪುರ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲಾಗಿತ್ತು. ಎರಡು ತಿಂಗಳ ನಂತರ, ಅದು ಕೇರಳದ ವಯನಾಡ್ ಜಿಲ್ಲೆ ಪ್ರವೇಶಿಸಿತ್ತು.

ಫೆಬ್ರವರಿ 10 ರಂದು ಕೇರಳದ ವಯನಾಡ್ ಜಿಲ್ಲೆಯಲ್ಲಿ ಆನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದರು. ಕಾಡಾನೆ ಮನೆಯಂಗಳಕ್ಕೆ ನುಗ್ಗಿ ವ್ಯಕ್ತಿಯೊಬ್ಬರ ಮೇಲೆ ದಾಳಿ ಮಾಡಿ ಸಾಯಿಸಿತ್ತು. ಈ ಆನೆ ಬೇಲೂರಿನಿಂದ ಸೆರೆಹಿಡಿದು ಅರಣ್ಯಕ್ಕೆ ಬಿಟ್ಟಿದ್ದ ಆನೆ ಎಂದು ರೇಡಿಯೋ ಕಾಲರ್ ಆಧಾರದಲ್ಲಿ ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾಯಿತ ಪ್ರತಿನಿಧಿಗಳು ಮತ್ತು ಕೇರಳ ಸರ್ಕಾರವು ಕರ್ನಾಟಕ ಸರ್ಕಾರವನ್ನು ವಿಶಾಲ ಹೃದಯದಿಂದ ಆ ಪ್ರಕರಣಕ್ಕೆ ಪರಿಹಾರ ನೀಡುವಂತೆ ವಿನಂತಿಸಿದೆ ಎಂದು ಸಚಿವರ ಕಚೇರಿ ತಿಳಿಸಿದೆ.

ಇದೀಗ ಪರಿಹಾರ ವಿಚಾರವನ್ನು ದೊಡ್ಡ ವಿವಾದವಾಗಿ ಪರಿಣಮಿಸಿದೆ. ನಮ್ಮ ರಾಜ್ಯದಲ್ಲಿ ಕಾಡಾನೆ ದಾಳಿಯಲ್ಲಿ ಮೃತಪಟ್ಟವರಿಗೆ ಸರಿಯಾದ ಪರಿಹಾರ ಸಿಕ್ಕಿಲ್ಲ ಇನ್ನು ಪಕ್ಕದ ರಾಜ್ಯದಲ್ಲಿ ಹತ್ಯೆಯಾದವರಿಗೆ ಸರ್ಕಾರ ಮುತುವರ್ಜಿ ವಹಿಸಿ ಪರಿಹಾರ ನೀಡಲು ಮುಂದಾಗಿದೆ. ಇದು ರಾಹುಲ್ ಗಾಂಧಿಯವರ ಕ್ಷೇತ್ರವಾಗಿರುವುದರಿಂದ ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಕಾಡುಪ್ರಾಣಿಗಳಿಗೆ ರಾಜ್ಯಗಳ ಗಡಿ ಗೊತ್ತಿಲ್ಲ. ನ್ಯಾಯಯುತವಾಗಿ ಕೇರಳ ಸರ್ಕಾರವೇ ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು.

ಸರ್ಕಾರ ಯಾರನ್ನೋ ಮೆಚ್ಚಿಸಲು ರಾಜ್ಯದ ಬೊಕ್ಕಸಕ್ಕೆ ನಷ್ಟವನ್ನುಂಟುಮಾಡುತ್ತಿದೆ ಎಂದು ಇಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಸರ್ಕಾರದ ಮೇಲೆ ಮುಗಿಬಿದ್ದಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ