October 5, 2024

ಸಹಕಾರ ಸಂಘಗಳ ನಾಮನಿರ್ದೇಶಿತ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವುದು ಮತ್ತು ನಾಮನಿರ್ದೇಶಿತ ಸದಸ್ಯರಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.

ಎಸ್ಸಿ/ಎಸ್ಟಿ ಸಮುದಾಯಗಳಿಗೆ ಮೀಸಲಾತಿಯನ್ನು ಖಾತ್ರಿಪಡಿಸುವ ಮೂಲಕ ರಾಜ್ಯದ ಅಪೆಕ್ಸ್ ಬ್ಯಾಂಕ್ ಸೇರಿದಂತೆ ಪ್ರಮುಖ ಸಹಕಾರ ಸಂಸ್ಥೆಗಳ ಆಡಳಿತ ಮಂಡಳಿಗಳಲ್ಲಿ ಮೀಸಲಾತಿ ಆಧಾರದ ಮೇಲೆ ಸರ್ಕಾರದ ನಾಮನಿರ್ದೇಶಿತರ ಸಂಖ್ಯೆಯನ್ನು ಮೂರಕ್ಕೆ ಹೆಚ್ಚಿಸುವ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ಮಸೂದೆ, 2024 ಅನ್ನು ಸೋಮವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಹಕಾರ ಸಂಘಗಳ ತಿದ್ದುಪಡಿ ಮಸೂದೆಯನ್ನು ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ ಅಂಗೀಕರಿಸಿದ್ದು, ಎಸ್ಸಿ/ಎಸ್ಟಿ ಸಮುದಾಯದಿಂದ ಒಬ್ಬರು, ಮಹಿಳೆ ಮತ್ತು ಸಾಮಾನ್ಯ ವರ್ಗದ ಒಬ್ಬರು ನಿರ್ದೇಶಕರಾಗಿರುತ್ತಾರೆ. ಈಗ 22 ಇರುವ ಅಪೆಕ್ಸ್ ಬ್ಯಾಂಕ್ ಆಡಳಿತ ಮಂಡಳಿಯ ಸಂಖ್ಯೆ ಇನ್ನುಮುಂದೆ 25ಕ್ಕೆ ಏರಲಿದ್ದು, ಪ್ರಮುಖ ನಿರ್ಧಾರ ತೆಗೆದುಕೊಳ್ಳುವಲ್ಲಿ ಸರ್ಕಾರ ಮೇಲುಗೈ ಸಾಧಿಸಬಹುದು.

ಕೆಲವು ಬಿಜೆಪಿ ಶಾಸಕರು ಮಸೂದೆಯನ್ನು ತೀವ್ರವಾಗಿ ವಿರೋಧಿಸಿದರು. ಸರ್ಕಾರ ಸಹಕಾರಿ ಕ್ಷೇತ್ರವನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಆದರೆ ಸಹಕಾರ ಸಚಿವ ಕೆಎನ್ ಎನ್ ರಾಜಣ್ಣ ಅವರು, ಅಂತಿಮವಾಗಿ ಕೆಲವುಲೋಪದೋಷಗಳುಇದ್ದರೆ, ಸರಿಪಡಿಸಲಾಗುವುದು ಎಂದು ಭರವಸೆ ನೀಡಿ ಮಸೂದೆಯನ್ನು ಅಂಗೀಕರಿಸಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ