October 5, 2024

ಕಳಸದಲ್ಲಿ ನಡೆದ ಕಳಶೇಶ್ವರ ಸ್ವಾಮಿ ವಾರ್ಷಿಕ ಜಾತ್ರಾ ಮಹೋತ್ಸವದಲ್ಲಿ ಇಸ್ಪೀಟ್ ಜೂಜಾಟ ನಡೆಸಿದ್ದ ಪ್ರಕರಣ ವಿವಾದಕ್ಕೆ ಕಾರಣವಾಗಿತ್ತು. ಧಾರ್ಮಿಕ ಉತ್ಸವದಲ್ಲಿ ಜೂಜಾಟ ಆಡಿಸಿದ ವಿಚಾರ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಈ ವಿಚಾರ ಮಾಧ್ಯಮಗಳಲ್ಲಿಯೂ ಸುದ್ದಿಯಾಗಿತ್ತು.

ದರ್ಪಣ ನ್ಯೂಸ್ ನಲ್ಲಿಯೂ ಸಹ ಇಂದು ಬೆಳಿಗ್ಗೆ ಈ ಬಗ್ಗೆ ವರದಿ ಪ್ರಕಟವಾಗಿತ್ತು. ಪೊಲೀಸರ ಉಪಸ್ಥಿತಿಯಲ್ಲಿಯೇ ರಾಜಾರೋಷವಾಗಿ ಇಸ್ಪೀಟ್ ಎಲೆಗಳನ್ನು ಬಳಸಿ ಹಣವನ್ನು ಕಟ್ಟಿಸಿಕೊಂಡು ಜೂಜಾಟ ನಡೆಸಿದ್ದ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು.

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಬಾಹೀರವಾಗಿ ಜೂಜಾಟ ನಡೆಸಿದ ಆರೋಪದ ಮೇಲೆ ನಾಲ್ವರ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಈ ಸಂಬಂಧ ಐಪಿಸಿ ಸೆಕ್ಷನ್ 78ರಂತೆ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಜಾತ್ರೆಯಲ್ಲಿ ಜೂಜಾಟ ಆಯೋಜಿಸಿದ್ದ ರಕ್ಷಿತ್, ಅಭಿ, ಕುಮಾರ ಮತ್ತು ಮಾರುತಿ ಇವರುಗಳನ್ನು ಬಂಧಿಸಲಾಗಿದೆ. ಕಳಸ ಠಾಣಾಧಿಕಾರಿ ಭರಮಪ್ಪ ಬಿಳಗಲಿ ಅವರು ಆರೋಪಿಗಳನ್ನು ವಶಕ್ಕೆ ಪಡೆದು ಜೂಜಾಟ ನಡೆಸಿದ್ದ ಜಾಗದ ಸ್ಥಳಮಹಜರು ನಡೆಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ