October 5, 2024

ಚಿಕ್ಕಮಗಳೂರು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಬ್ಯಾರವಳ್ಳಿ ಗ್ರಾಮದ ಶ್ರೀಮತಿ ವಾರಿಜ(55 ವರ್ಷ) ಮಂಗಳವಾರ ಅಕಾಲಿಕವಾಗಿ ನಿಧನ ಹೊಂದಿದ್ದಾರೆ.

ವಾರಿಜ ಅವರು 2007 ರಿಂದ 2012ರ ವರೆಗೆ ಚಿಕ್ಕಮಗಳೂರು ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ ಮತ್ತು ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಅವರು ಚಿಕ್ಕಮಗಳೂರು ತಾಲ್ಲೂಕು ಮಾಕೋಡು ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೂಡಿಗೆರೆ ತಾಲ್ಲೂಕಿನ ಹೆಸಗಲ್ ಗ್ರಾಮ ವಾರಿಜ ಅವರ ತವರೂರು.

. ಮೃತರು ಪತಿ ಮೋಹನ್ ಕುಮಾರ್ ಹಾಗೂ ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅಂತ್ಯ ಸಂಸ್ಕಾರ ಮಂಗಳವಾರ ಬ್ಯಾರವಳ್ಳಿ ಗ್ರಾಮದಲ್ಲಿ ನೆರವೇರಿತು. ವಾರಿಜಾ ಅವರ ನಿಧನಕ್ಕೆ ಜನಪ್ರತಿನಿಧಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ