October 5, 2024

ತಮ್ಮ ಜೀವನವನ್ನೇ ಮುಡುಪಾಗಿಟ್ಟು ದಲಿತರು ಸೇರಿದಂತೆ ಎಲ್ಲಾ ಬಡ ಜನರ ಅಭಿವೃದ್ಧಿಗಾಗಿ ಶ್ರಮಿಸಿದ ಖ್ಯಾತ ಚಲನಚಿತ್ರ ನಟ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರ ನಿಧನದಿಂದ ತುಂಬಲಾರದ ನಷ್ಟ ಉಂಟಾಗಿದೆ ಎಂದು ಮಾಜಿ ಸಚಿವೆ ಮೋಟಮ್ಮ ಹೇಳಿದರು.

ಅವರು ಗುರುವಾರ ಮೂಡಿಗೆರೆ ಪಟ್ಟಣದಲ್ಲಿ ಕೆ.ಶಿವರಾಂ ಅವರಿಗೆ ಸಂತಾಪ ಸೂಚಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆ.ಶಿವರಾಂ ಅವರು ಕಡು ಬಡತನದಲ್ಲಿ ಹುಟ್ಟಿ ಕನ್ನಡದಲ್ಲಿ ಐಎಎಸ್ ಪರೀಕ್ಷೆ ಬರೆದ ಮೊದಲ ವ್ಯಕ್ತಿಯಾಗಿದ್ದಾರೆ. ಹಿಂದೆ ಯಾವುದೇ ಸೌಲಭ್ಯಗಳು ಸಿಗದೇ ಮರದ ನೆರಳಲ್ಲಿ, ರಾತ್ರಿ ಸೀಮೆಎಣ್ಣೆ ದೀಪದಲ್ಲಿ ಓದಿ ಐಎಎಸ್ ಪರೀಕ್ಷೆಯಲ್ಲಿ ಪಾಸಾಗಿರುವುದು ಈಗಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಬದುಕಬೇಕೆಂದು ದಲಿತ ವಿದ್ಯಾರ್ಥಿಗಳಿಗೆ ಮತ್ತಷ್ಟು ಪ್ರೇರಣೆ ಹುಟ್ಟಿಸಿದ್ದರು ಎಂದು ಹೇಳಿದರು.

ಅವರು ಸಮಾಜ ಕಲ್ಯಾಣ ಇಲಾಖೆಯಲ್ಲಿ ಕಮಿಷನರ್ ಆದಾಗ ಹಾಸ್ಟೆಲ್ ಸುಧಾರಣೆ, ದಲಿತರು ಜಮೀನು ಖರೀದಿಗೆ 5 ಲಕ್ಷ ರೂ ಸಹಾಯಧನ, ಪ್ರತಿಭಾವಂತ ಬಡ ವಿದ್ಯಾರ್ಥಿಗಳಿ ಬೆಂಗಳೂರಿನ ಪ್ರತಿಷ್ಠಿತ ಕಾಲೇಜುಗಳಲ್ಲಿ ಶುಲ್ಕ ಭರಿಸುವ ಹಾಗೂ ಮಾಸಿಕ ವಿದ್ಯಾರ್ಥಿವೇತನ ಕೊಡುವುದಲ್ಲದೇ, ವಿವಿಧ ಪದವಿ ತರಬೇತಿ, ನಸಿರ್ಂಗ್ ಕೋಸ್ರ್ಸ್ ದೊರಕಿಸುವ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಜೀವನಕ್ಕೆ ದಾರಿದೀಪವಾಗಿದ್ದಾರೆ. ಅಂತಹ ದೀಪ ಇಂದು ಹಾರಿರುವುದು ಜನಾಂಗ ಹಾಗೂ ಬಡಜನರಿಗೆ ನಷ್ಟ ಉಂಟಾಗಿದೆ. ಅವರ ಮಾರ್ಗದರ್ಶನ ಯುವ ಜನಾಂಗಕ್ಕೆ ಇನ್ನೂ ಬೇಕಾಗಿತ್ತು. ಅಂತಹ ಮಹಾನ್ ವ್ಯಕ್ತಿಯನ್ನು ಕಳೆದುಕೊಂಡಿರುವುದು ನಿಜಕ್ಕೂ ನಷ್ಟ ಉಂಟಾಗಿದೆ. ಅವರ ಅಗಲಿಕೆಯ ದುಖಃ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಸಂತಾಪ ಸೂಚಿಸಿದರು.

ಪ.ಪಂ. ಸದಸ್ಯ ಹೊಸಕೆರೆ ರಮೇಶ್, ಕಾಂಗ್ರೆಸ್ ಎಸ್ಸೀ ಘಟಕದ ಅಧ್ಯಕ್ಷ ಸುಧೀರ್, ಎಸ್ಟಿ ಘಟಕದ ಅಧ್ಯಕ್ಷ ಹರೀಶ್, ಸಂಪತ್ ಬಿಳಗುಳ, ಸುರೇಂದ್ರ ಉಗ್ಗೇಹಳ್ಳಿ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ