October 5, 2024

ಕರ್ನಾಟಕ ರಾಜ್ಯ ಬಾಲ್ ಬ್ಯಾಡ್ಮಿಂಟನ್ ಅಸೋಷಿಯೇಷನ್ ಇದರ ರಾಜ್ಯ ಉಪಾಧ್ಯಕ್ಷರಾಗಿ ಡಿ.ಕೆ. ಲಕ್ಷ್ಮಣಗೌಡ ಆಯ್ಕೆಯಾಗಿದ್ದಾರೆ.

ಡಿ.ಕೆ. ಲಕ್ಷ್ಮಣಗೌಡ ಅವರು ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಯ್ಕೆ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಇದೀಗ ಇವರ ಸೇವೆಯನ್ನು ಗುರುತಿಸಿ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಡಿ.ಕೆ. ಲಕ್ಷ್ಮಣಗೌಡ ಅವರು ಚಿಕ್ಕಮಗಳೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಷಿಯೇಷನ್ ಅಧ್ಯಕ್ಷರಾಗಿರುತ್ತಾರೆ. ಮೂಡಿಗೆರೆ ತಾಲ್ಲೂಕು ತಾಲ್ಲೂಕು ದರ್ಶನ ಗ್ರಾಮದ ಲಕ್ಷ್ಮಣಗೌಡ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಹಲವು ಸಾಧನೆಗಳನ್ನು ಮಾಡಿದ್ದು, ಮೂಡಿಗೆರೆ ಫ್ರೆಂಡ್ಸ್ ಯೂನಿಯನ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಇದರ ಅಧ್ಯಕ್ಷರಾಗಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಇವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯನ್ನು ಪ್ರೋತ್ಸಾಹಿಸುತ್ತಾ ಬರುತ್ತಿದ್ದಾರೆ. ಅನೇಕ ಉದಯೋನ್ಮುಖ ಪ್ರತಿಭೆಗಳು, ವಿದ್ಯಾರ್ಥಿಗಳು ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಸಾಧನೆ ಮಾಡಲು ಪ್ರೋತ್ಸಾಹ ನೀಡುತ್ತಿದ್ದಾರೆ.

ರಾಜ್ಯ ಬಾಲ್ ಬ್ಯಾಡ್ಮಿಂಟನ್ ಅಸೋಷಿಯೇಷನ್ ಟೂರ್ನಮೆಂಟ್ ಕಮಿಟಿ ಸದಸ್ಯರಾಗಿ ಹೆಚ್.ಕೆ. ಶಿವಕುಮಾರ್ ಹಳಿಕೆ ಇವರು ಆಯ್ಕೆಯಾಗಿದ್ದಾರೆ. ಶಿವಕುಮಾರ್ ಇವರು ಚಿಕ್ಕಮಗಳೂರು ಜಿಲ್ಲಾ ಬಾಲ್ ಬ್ಯಾಡ್ಮಿಂಟನ್ ಅಸೋಷಿಯೇಷನ್ ಜಿಲ್ಲಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶಿವಕುಮಾರ್ ಅವರು ಬೆಟ್ಟಗೆರೆ ಬೈರವೇಶ್ವರ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಮತ್ತು ಮೂಡಿಗೆರೆ ಫ್ರೆಂಡ್ಸ್ ಯೂನಿಯನ್ ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಅನೇಕ ಜಿಲ್ಲಾ ಮತ್ತು ರಾಜ್ಯಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದಾರೆ.

ತಮ್ಮನ್ನು ರಾಜ್ಯ ಸಮಿತಿಗೆ ಆಯ್ಕೆ ಮಾಡಿದ ಬಾಲ್ ಬ್ಯಾಡ್ಮಿಂಟನ್ ಅಸೋಷಿಯೇಷನ್ ರಾಜ್ಯ ಗೌರವ ಅಧ್ಯಕ್ಷರಾದ ದಿನೇಶ್, ಅಧ್ಯಕ್ಷರಾದ ಪ್ರಸಾದ್, ಕಾರ್ಯದರ್ಶಿ ಪ್ರವೀಣ್ ಆಳ್ವಾಸ್ ಹಾಗೂ ಖಜಾಂಚಿ ಬಾಬುರೆಡ್ಡಿ ಹಾಗೂ ಎಲ್ಲಾ ಪದಾಧಿಕಾರಿಗಳಿಗೆ ಡಿ.ಕೆ. ಲಕ್ಷ್ಮಣಗೌಡ ಮತ್ತು ಹೆಚ್.ಕೆ. ಶಿವಕುಮಾರ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ