October 5, 2024

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಿಹಿಸುದ್ದಿ ನೀಡಿದ್ದಾರೆ.

ಗೃಹ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆಯಲ್ಲಿ ಶೇಕಡಾ 20ಕ್ಕೂ ಹೆಚ್ಚಿನ ಬೆಲೆ ಕಡಿತಗೊಳಿಸಿದ್ದು, ಪ್ರತಿ ಗೃಹಬಳಕೆ ಸಿಲಿಂಡರ್ ಗೆ 100 ರೂ. ಬೆಲೆ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್​ ನಲ್ಲಿ ಪ್ರಧಾನಿ ಮೋದಿಯವರು ಈ ಘೋಷಣೆಯನ್ನು ಮಾಡಿದ್ದಾರೆ. ದೇಶದ ಮಹಿಳೆಯರ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಬದ್ಧತೆಗೆ ಪೂರಕವಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.

‘ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್​ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಕಡಿಮೆ ಮಾಡುತ್ತಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡಲಿದೆ. ಈ ನಿರ್ಧಾರವು ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ.

ಅಡುಗೆ ಅನಿಲವನ್ನು ಕೈಗೆಟುಕುವ ದರದಲ್ಲಿ ಸಿಗುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮವನ್ನು ನೋಡಿಕೊಳ್ಳುತ್ತೇವೆ. ಜೊತೆಗೆ, ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ.

ಈ ನಿರ್ಧಾರವು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರ ಬದುಕನ್ನು ಸುಲಭಗೊಳಿಸುವುದನ್ನು ಖಾತರಿಪಡಿಸಿಕೊಳ್ಳುವ ನಮ್ಮ ಬದ್ಧತೆಗೆ ಪೂರಕವಾಗಿದೆ ಎಂದು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ