October 5, 2024

ಹಗಲು ರಾತ್ರಿ ಸದಾ ಸಾರ್ವಜನಿಕರ ಸೇವೆ ಸಲ್ಲಿಸುವ ಆಟೋ ಚಾಲಕರು ಮತ್ತು ಮಾಲೀಕರಿಗೆ ತಮ್ಮ ಅಟೋಗಳನ್ನು ನಿಲ್ಲಿಸಲು ನೆರಳು ಮತ್ತು ನೀರಿನ ಸೂರನ್ನು ನೀಡಬೇಕಾಗಿದ್ದು ನಮ್ಮ ಕರ್ತವ್ಯ ಎಂದು ವಿಧಾನ ಪರಿಷತ್ ಉಪಸಭಾಪತಿ ಎಂ ಕೆ ಪ್ರಾಣೇಶ್ ತಿಳಿಸಿದರು

ಅವರು ತಮ್ಮ ವಿಧಾನ ಪರಿಷತ್ ಸದಸ್ಯರ ಅನುದಾನದಲ್ಲಿ ರೂ. 5 ಲಕ್ಷ ದಲ್ಲಿ ಪಟ್ಟಣದ ತಾಲೂಕು ಕಛೇರಿ ಮುಂಭಾಗ ನಿರ್ಮಾಣ ಮಾಡಿರುವ ಸ್ವತಶ್ಚಲಿ ಆಟೋ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು.

ಆಟೋ ಚಾಲಕರು  ಎಲೆಮರೆಯ ಕಾಯಿಯಂತೆ ಸಮಾಜ ಸೇವೆಯಲ್ಲಿ ನಿರತರಾಗಿದ್ದಾರೆ. ಬರುವ ಅಲ್ಪ ಆದಾಯದಲ್ಲಿ ಆಟೋ ಚಾಲಕರು ತಮ್ಮ ಕುಟುಂಬವನ್ನು ನಿರ್ವಹಣೆ ಮಾಡುತ್ತಾರೆ. ಆಟೋ ಚಾಲಕರು ತಮ್ಮ ಆಟೋಗಳನ್ನು ಬಿಸಿಲು ಮತ್ತು ಮಳೆಯಲ್ಲಿ ನಿಲ್ಲಿಸಿಕೊಂಡು ನಲುಗುವುದನ್ನು ತಡೆಯಲು ಉತ್ತಮ ನಿಲ್ದಾಣ ಅವಶ್ಯಕತೆ ಇದ್ದು ನಾನು ಈ ಸಂಘದ ಗೌರವಾಧ್ಯಕ್ಷ ಆಗಿದ್ದಾಗೆಲ್ಲ ಇದನ್ನು ಮನಗಂಡಿದ್ದೆ. ಸದ್ಯಕ್ಕೆ ಮೂಡಿಗೆರೆಯಲ್ಲಿ ಒಂದು ಆಟೋ ನಿಲ್ದಾಣಕ್ಕೆ ಮೇಲ್ಚಾವಣಿ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇತರೆ ಆಟೋ ನಿಲ್ದಾಣಗಳಿಗೂ ಮೇಲ್ಚಾವಣಿ ನಿರ್ಮಿಸಲು ಸಹಕಾರ ನೀಡುವುದಾಗಿ ತಿಳಿಸಿದರು.  ಆಟೋ ನಿಲ್ದಾಣವನ್ನು ಸುಸ್ಥಿತಿಯಲ್ಲಿಟ್ಟುಕೊಂಡು  ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಗಮನ ಹರಿಸಬೇಕು ಎಂದರು.

ಮಾಜಿ ಸಚಿವೆ ಮೊಟ್ಟಮ್ಮ ಮಾತನಾಡಿ ಆಟೋ ಚಾಲಕರು ಮತ್ತು ಮಾಲೀಕರು ರಸ್ತೆಯಲ್ಲಿ ತಮ್ಮ ವಾಹನವನ್ನು ಚಾಲನೆ ಮಾಡುವಾಗ ಎಚ್ಚರಿಕೆಯಿಂದ ಇರಬೇಕು ಹಾಗೂ ಸಮಾಜದಲ್ಲೇ ನಡೆಯುವ ಅಪರಾಧಗಳನ್ನು ಗಮನಿಸುತ್ತಿರಬೇಕು ಮತ್ತು ಸಾರ್ವಜನಿಕರಿಗೆ ನಿಸ್ವಾರ್ಥ ಸೇವೆ ಸಲ್ಲಿಸಬೇಕು. ನಿಮ್ಮ ಸೇವೆ ಸಮಾಜದಲ್ಲಿ ಅನನ್ಯವಾದದ್ದು ವಿಶೇಷವಾಗಿ ಹೆಣ್ಣು ಮಕ್ಕಳು ಮತ್ತು ಮಕ್ಕಳ ಬಗ್ಗೆ ಹೆಚ್ಚು ಗಮನ ಹರಿಸಿ ಆರೋಗ್ಯಕರ ಸೇವೆ ನೀಡಿ  ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಆಟೋ ಸಂಘದ ಗೌರವ ಅಧ್ಯಕ್ಷ ಎಂ.ಹೆಚ್. ಅಮರನಾಥ್ ಆಟೊ ಚಾಲಕರ ಹಲವು ಸಮಸ್ಯೆಗಳ ಬಗ್ಗೆ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಗಮನ ಸೆಳೆದರು. ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಮತ್ತು ಆಟೋ ಬ್ಯಾಡ್ಜ್ ಗಳಿಗೆ ಸಂಬಂಧಿಸಿದಂತೆ ಆಟೋ ಚಾಲಕರಿಗೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಕಾಫಿ ಮಂಡಳಿ ಅಧ್ಯಕ್ಷ ದಿನೇಶ್. ದೇವರುಂದ, ಪೊಲೀಸ್ ವೃತ್ತ ನಿರೀಕ್ಷಕ ಸೋಮೇಗೌಡ ತಾಲ್ಲೂಕು ಆಟೋ ಚಾಲಕರ ಸಂಘದ ಅಧ್ಯಕ್ಷ ನಾಗೇಶ್ ಹಾಗೂ ವಿವಿಧ ಆಟೋ ಸಂಘಗಳ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪಟ್ಟಣ ಪಂಚಾಯಿತಿ ಸದಸ್ಯರು, ವಿವಿಧ ರಾಜಕೀಯ ಪಕ್ಷಗಳ ಮತ್ತು ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.  ನಗರ ಆಟೋ ಚಾಲಕರ ಸಂಘದ ಅಧ್ಯಕ್ಷ ಚಂದ್ರೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ