October 5, 2024

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ ವರ್ಗಾಯಿಸಲು ಆದೇಶಿಸಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಬಾಲಕಿ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಂತ್ರಸ್ತೆ ತಾಯಿ ಸಲ್ಲಿಸಿದ ದೂರಿನಲ್ಲೇನಿದೆ?: ಒಬ್ಬ ಮಹಿಳೆಯ ಅಪ್ರಾಪ್ತ ಮಗಳ ಮೇಲೆ ಈ ಹಿಂದೆ ಅತ್ಯಾಚಾರ ಆಗಿತ್ತು ಎನ್ನಲಾಗಿದೆ. ಈ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸುವಂತೆ ಸಹಕರಿಸಬೇಕು ಎಂದು ಒತ್ತಾಯಿಸಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಮಗಳ ಜತೆಗೆ ಆಕೆ ಹೋಗಿದ್ದರು. ಈ ವೇಳೆ ಯಡಿಯೂರಪ್ಪ ಅವರು ತಾಯಿ ಮತ್ತು ಮಗಳ ಜತೆ 9 ನಿಮಿಷಗಳ ಕಾಲ ಮಾತನಾಡಿದ್ದರು ಎನ್ನಲಾಗಿದೆ. ಆಗ ಅವರು ಬಾಲಕಿಯನ್ನು ತಮ್ಮ ಪಕ್ಕದಲ್ಲೇ ಕೂರಿಸಿಕೊಂಡು ಸಾಂತ್ವನ ಹೇಳಿದ್ದರು ಎನ್ನಲಾಗಿದೆ. ಯಡಿಯೂರಪ್ಪ ಅವರು ಮುಂದೆ ಬಾಲಕಿಯನ್ನು ತನ್ನ ರೂಮಿಗೆ ಕರೆದುಕೊಂಡು ಹೋಗಿ ಐದು ನಿಮಿಷ ಬಾಗಿಲು ಹಾಕಿಕೊಂಡಿದ್ದರು. ಈ ವೇಳೆ ಅವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬಾಲಕಿ ತಾಯಿ ಬಳಿ ಹೇಳಿದ್ದಾಳೆ ಎನ್ನುವುದು ದೂರು.

ಈ ಮಹಿಳೆ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ. ಇಷ್ಟೊಂದು ಜನ ಆರೋಪಿಗಳಾಗಿದ್ದು ಹೇಗೆ, ಅವರ ಪಾತ್ರ ಏನು? ಅವರೆಲ್ಲರೂ ದೌರ್ಜನ್ಯ ಎಸಗಿದರಾ ಎನ್ನುವುದು ತನಿಖೆಯಿಂದ ಸ್ಪಷ್ಟವಾಗಬೇಕಾಗಿದೆ.

ಇದಕ್ಕೆ ಯಡಿಯೂರಪ್ಪ ಅವರು ಹೇಳುವುದೇನು?

ತಮ್ಮ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾದ ಬಳಿಕ ಶುಕ್ರವಾರ ಬೆಳಗ್ಗೆ 10 ಗಂಟೆಯ ಹೊತ್ತಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಬಿ.ಎಸ್‌. ಯಡಿಯೂರಪ್ಪ ಅವರು, ನಾನು ಉಪಕಾರ ಮಾಡಲು ಹೋದರೆ ನನ್ನ ವಿರುದ್ಧವೇ ಹೀಗೆ ಮಾಡಿದ್ದಾರೆ ಎಂದು ಹೇಳಿದರು.

ಯಾರೋ ಒಬ್ಬ ಹೆಣ್ಣು ಮಗಳು ಅನ್ಯಾಯವಾಗಿದೆ ಎಂದು ನನ್ನ ಬಳಿ ಬಂದಿದ್ದರು. ತಾಯಿ- ಮಗಳು ಹಲವು ಬಾರಿ ಬಂದಿದ್ದರು. ಅವರನ್ನು ಮನೆಯ ಒಳಗೆ ಕರೆಸಿ ಸಮಸ್ಯೆ ಕೇಳಿದ್ದೇನೆ. ಈ ವೇಳೆ ತಮಗೆ ಅನ್ಯಾಯವಾಗಿದೆ ಎಂದಿದ್ದರು. ಆಮೇಲೆ ನನ್ನ ಬಗ್ಗೆಯೇ ಏನೇನೋ ಮಾತನಾಡಲು ಶುರು ಮಾಡಿದರು. ಆಗ ಕಮಿಷನರ್‌ಗೆ ಕರೆ ಮಾಡಿ ಅವರನ್ನು ಕಳುಹಿಸಿಕೊಟ್ಟೆ” ಎಂದು ಯಡಿಯೂರಪ್ಪ ವಿವರಣೆ ನೀಡಿದ್ದಾರೆ.

ನಾನು ಸಹಾಯ ಮಾಡಲು ಹೋದರೆ ಇನ್ನ ವಿರುದ್ಧವೇ ಏನೇನೋ ಮಾತನಾಡುತ್ತಿದ್ದಾರೆ. ನನ್ನ ಮೇಲೆ ದೂರು ಕೊಟ್ಟಿದ್ದಾರೆ. ಈ ಆರೋಪಗಳು ನಿರಾಧಾರವಾಗಿದೆ. ಏನೇ ಇದ್ದರೂ ಎಲ್ಲವನ್ನು ಎದುರಿಸೋಣ ಎಂದು ಅವರು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ