October 5, 2024

ದಾಖಲೆ ಇಲ್ಲದೇ ಬಲೆನೋ ಕಾರಿನಲ್ಲಿ ಸಾಗಿಸುತ್ತಿದ್ದ 18 ಚಿನ್ನದ ಉಂಗುರಗಳನ್ನು ಚಿಕ್ಕಮಗಳೂರು ಜಿಲ್ಲೆಯ ವಸ್ತಾರೆ ಪೊಲೀಸ್ ಜಂಕ್ಷನ್ ನಲ್ಲಿ ವಶ ಪಡಿಸಿಕೊಳ್ಳಲಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಾಹನ ತಡೆದು ತಡೆದು ತಪಾಸಣೆ ನಡೆಸುವ ವೇಳೆ 90 ಗ್ರಾಂ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತೆರೆದಿರುವ ಚೆಕ್ ಪೋಸ್ಟ್ ನಲ್ಲಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳವಾರ ಚಿಕ್ಕಮಗಳೂರು ನಗರದ ಹೊರವಲಯದ ವಸ್ತಾರೆ ಗ್ರಾಮದ ಬಳಿ ದಾಖಲೆ ಇಲ್ಲದೇ ಬಲೆನೋ ವಾಹನದಲ್ಲಿ ಸಾಗಿಸುತ್ತಿದ್ದ 90 ಗ್ರಾಂ ತೂಕದ 18 ಚಿನ್ನದ ಉಂಗುರಗಳನ್ನು ವಶಕ್ಕೆ ಪಡೆಯಲಾಗಿದೆ.

ಚಿಕ್ಕಮಗಳೂರು ನಗರದ ವಿಜಯಪುರದ ಚಿನ್ನದ ವ್ಯಾಪಾರಿ ಒಬ್ಬರು ಗಟ್ಟಿ ಖರೀದಿಸಿ ಅದರಿಂದ ಉಂಗುರಗಳನ್ನು ತಯಾರಿಸಿ ಉಡುಪಿಯ ಜ್ಯುವೆಲರಿ ಅಂಗಡಿ ಮಾಲೀಕರಿಗೆ ಕೊಡಲು ತೆಗೆದುಕೊಂಡು ಹೋಗುತ್ತಿದ್ದರು ಎನ್ನಲಾಗಿದೆ. ಆದರೆ ಆ ಆಭರಣಕ್ಕೆ ಯಾವುದೇ ದಾಖಲೆಗಳಿಲ್ಲದೇ ಇದ್ದುದರಿಂದ ತಪಾಸಣೆ ನಡೆಸಿದ ಪೊಲೀಸರು ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಇದೀಗ ನೀತಿ ಸಂಹಿತೆ ಜಾರಿಯಾಗಿದ್ದು, ಸಾರ್ವಜನಿಕರು ನಿಗದಿಗಿಂತ ಹೆಚ್ಚಿನ ಆಭರಣ, ಐವತ್ತು ಸಾವಿರಕ್ಕಿಂತ ಹೆಚ್ಚಿನ ಹಣವನ್ನು ಕೊಂಡೊಯ್ಯಬೇಕಾದರೆ ಅದಕ್ಕೆ ಸೂಕ್ತ ದಾಖಲೆಗಳನ್ನು ತೋರಿಸಬೇಕಾಗುತ್ತದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ