October 5, 2024

ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ ನೋಡಲ್ ಅಧಿಕಾರಿಯ ಸೂಚನೆ ಮೇರೆಗೆ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಕೆ.ಜಯಲಕ್ಷ್ಮಮ್ಮ ನಗರ ಠಾಣೆಗೆ ದೂರು ನೀಡಿ ಎಫ್ಐಆರ್ ದಾಖಲಿಸಿದ್ದಾರೆ.

“ಸಿ ಟಿ ರವಿ ಬರಹ ಚುನಾವಣಾ ನೀತಿ ಸಂಹಿತೆಯಡಿ ಉಲ್ಲಂಘನೆಯಾಗಿರುವುದು ಮೇಲ್ನೋಟಕ್ಕೆ ಕಂದು ಬಂದಿದೆ. ಕಾನೂನು ಕ್ರಮ
ಸಾಮಾಜಿಕ ಜಾಲತಾಣದಲ್ಲಿ ದ್ವೇಷಕಾರಕ ಪೋಸ್ಟ್ ಹಾಕಿದ ಆರೋಪದ ಮೇಲೆ ಮಾಜಿ ಶಾಸಕ ಸಿಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಸಿಟಿ ರವಿ ರಾಹುಲ್ ಗಾಂಧಿ ಹೇಳಿಕೆ ಉಲ್ಲೇಖಿಸಿ ಬರೆದುಕೊಂಡಿದ್ದ ಹೇಳಿಕೆ ಚುನಾವಣಾ ನೀತಿ ಸಂಹಿತೆಯ ಸ್ಪಷ್ಡ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣ ಸಮಿತಿಯ ಸಹಾಯಕ ಚುನಾವಣಾಧಿಕಾರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಮೇರೆಗೆ ಪೊಲೀಸರು ಎಪ್ ಐ ಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿ.ಟಿ.ರವಿ ಅವರು ಎಕ್ಸ್ ನಲ್ಲಿ, ” ಸಾಗರದ ಆಳವನ್ನಾದರೂ ಅಳೆಯಬಹುದು, ಆದರೆ ರಾಹುಲ್ ಗಾಂಧಿ ಮನಸಿನಲ್ಲಿ ಹಿಂದುಗಳು ಮತ್ತು ಹಿಂಧೂ ಧರ್ಮದ ಬಗ್ಗೆ ಇರುವ ಧ್ವೇಷವನ್ನು ಅಳೆಯಲಾಗದು. ರಾಹುಲ್ ಗಾಂಧಿ ಅವರು, ಶಕ್ತಿ ವಿರುದ್ಧ ನಮ್ಮ ಹೋರಾಟ ಎಂದಿದ್ದಾರೆ. ಹಿಂದು ಧರ್ಮದಲ್ಲಿ ಶಕ್ತಿ ಎಂಬುದಕ್ಕೆ ವಿಶೇಷ ಅರ್ಥ, ಗೌರವ ಇದೆ, ಇದರ ವಿರುದ್ಧ ಹೋರಾಟ ಮಾಡುವವರು, ಹಿಂದೂ ದರ್ಮದ ವಿರೋಧಿಗಳು, ದುಷ್ಟ ಶಕ್ತಿಗಳ ದಾಳಿಯಿಂದ ನಮ್ಮ ಧರ್ಮವನ್ನು ರಕ್ಷಿಸಲು ಹಿಂದೂಗಳು ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ನಿರ್ದಯವಾಗಿ ತೆಗೆದು ಹಾಕಬೇಕು” ಎಂದು ಸಿ.ಟಿ. ರವಿ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದರು.

ಇದನ್ನು ಗಮನಿಸಿದ್ದ ಚುನಾವಣಾ ಆಯೋಗ ಈ ಬರಹ ನೀತಿ ಸಂಹಿತೆಯಡಿಯಲ್ಲಿ ಧ್ವೇಷ ಕಾರುವ ಹೇಳಿಕೆಯಾಗಿದ್ದು, ಹೇಳಿಕೆ ವಿರುದ್ಧ ದೂರು ದಾಖಲಿಸಿ ವರದಿ ನೀಡುವಂತೆ ಜಿಲ್ಲಾ ಮಟ್ಟದ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.

ಅದರಂತೆ ಸಾಮಾಜಿಕ ಜಾಲತಾಣಗಳ ಮೇಲ್ವಿಚಾರಣ ಸಮಿತಿಯ ಸಹಾಯಕ ಚುನಾವಣಾಧಿಕಾರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಮೇರೆಗೆ ಪೊಲೀಸರು ಎಪ್ ಐ ಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ