October 5, 2024

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ತಮ್ಮ ಕುಟುಂಬದವರೊಂದಿಗೆ ಕಳಸ ತಾಲೂಕಿನ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಆಗಮಿಸಿ ಚಂಡಿಕಾ ಯಾಗ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳಲ್ಲಿ ಭಾಗಿಯಾದರು.

ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಆಗಮಿಸಿದ ಯಡಿಯೂರಪ್ಪ ಹಾಗೂ ಕುಟುಂಬ ರಥೋತ್ಸವದಲ್ಲಿ ಭಾಗಿಯಾಗಿ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿಯೇ ವಾಸ್ತವ್ಯ ಹೂಡಿದ್ದರು. ಭಾನುವಾರ ಬೆಳಗ್ಗೆಯೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದ ಬಿಎಸ್ ವೈ ಹಾಗೂ ಕುಟುಂಬ ಬಳಿಕ ಚಂಡಿಕಾ ಯಾಗದಲ್ಲಿ ಪಾಲ್ಗೊಂಡರು.

ಸತತ ಮೂರುವರೆ ಗಂಟೆಗಳ ಕಾಲ ನಡೆದ ಚಂಡಿಕಾಯಾಗದಲ್ಲಿ ಬಿ ವೈ ವಿಜಯೇಂದ್ರ ಹಾಗೂ ಅವರ ಪತ್ನಿ ಹೋಮಕುಂಡದ ಧಾರ್ಮಿಕ ಪ್ರಕ್ರಿಯೆಗಳಲ್ಲಿ ಭಾಗಿಯಾದರೆ ಯಡಿಯೂರಪ್ಪ, ಅವರ ಪುತ್ರಿಯರು ಹಾಗೂ ಸೊಸೆ ಉಪಸ್ಥಿತರಿದ್ದರು.

ಅಭಿವೃದ್ಧಿ ಯಶಸ್ಸು ಹಾಗೂ ಶತ್ರುನಾಶಕ್ಕಾಗಿ ಹಿಂದೆ ರಾಜರು ಚಂಡಿಕಾ ಯಾಗ ನಡೆಸುತ್ತಿದ್ದರು. ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲಿ ಬಿ.ಎಸ್. ಯಡಿಯೂರಪ್ಪ ಹಾಗೂ ಕುಟುಂಬದವರು ಚಂಡಿಕಾ ಯಾಗದ ಮೊರೆ ಹೋಗಿರುವುದು ಹಲವು ಕುತೂಹಲಗಳಿಗೆ ಕಾರಣವಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತಷ್ಟು ಶಕ್ತಿ ಬರಲಿ. ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಹೊರನಾಡು ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮಾತನಾಡಿ ರಾಜ್ಯದಲ್ಲಿ ಉತ್ತಮ ಮಳೆ ಬೆಳೆಗಾಗಿ ಪೂಜೆ ಸಲ್ಲಿಸಿದ್ದೇವೆ. ದೇವಿಯ ಮುಂದೆ ರಾಜ್ಯದ ಸಮೃದ್ಧಿಗಾಗಿ ಪ್ರಾರ್ಥನೆ ಮಾಡಿದ್ದೇನೆ. ರಾಜ್ಯದ ೨೮ ಲೋಕಸಭಾ ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿದೆ ತಾಯಿಯ ಆಶೀರ್ವಾದದಿಂದ ನಾವು ಈ ಬಾರಿ ಯಶಸ್ವಿಯಾಗುತ್ತೇವೆ. ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವ ಚುನಾವಣೆ ಇದು. ಹೀಗಾಗಿ ಹೊರನಾಡು ಅನ್ನಪೂರ್ಣೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದರು.

ಬಿ.ಎಸ್.ವೈ, ವಿಜಯೇಂದ್ರ ಸೇರಿದಂತೆ ಇಡೀ ಕುಟುಂಬ ಯಾಗದಲ್ಲಿ ಭಾಗಿಯಾಯಿತು.ಯಾಗದ ಬಳಿಕ ಬೆಂಗಳೂರಿಗೆ ತೆರಳಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ