October 5, 2024

ಗೋ ಹತ್ಯೆ ನಿಯಂತ್ರಣಕ್ಕೆ ಎಷ್ಟೇ ಕಾನೂನು ಜಾರಿಯಲ್ಲಿದ್ದರೂ ಗೋವುಗಳ ಮಾರಣಹೋಮ ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ, ಹಾಸನದಲ್ಲಿ ಗೋಮಾಂಸದ ಅಕ್ರಮ ಮಾರಾಟದ ಜಾಲವೊಂದು ಬಯಲಾಗಿದೆ. ಮಾಂಸ ಮಾರಾಟಕ್ಕಾಗಿ ಕಟುಕರು ಸುಮಾರು 60ಕ್ಕೂ ಅಧಿಕ ಗೋವುಗಳನ್ನು ವಧೆ   ಮಾಡಿದ್ದಾರೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಬಾಗೂರು ರಸ್ತೆಯಲ್ಲಿ ಸುಮಾರು 60 ಗೋವುಗಳನ್ನು ಕೊಂದಿರುವ ಜಾಲವನ್ನು ಪೊಲೀಸರು ಗುರುವಾರ ಭೇದಿಸಿದ್ದಾರೆ. ನಿಖರ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಐದು ಗೋವುಗಳನ್ನು ರಕ್ಷಣೆ ಮಾಡಿದ್ದಾರೆ. ಇನ್ನು 60 ಗೋವುಗಳನ್ನು ಕೊಂದ ದುಷ್ಕರ್ಮಿಗಳು, ಅವುಗಳನ್ನು ನೇತು ಹಾಕಿದ್ದರು. ಪೊಲೀಸರು ಸುಮಾರು 10 ಸಾವಿರ ಕೆ.ಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

ಮೊಹಮ್ಮದ್‌ ಅಬ್ದುಲ್‌ ಹಕ್‌ ಎಂಬುವವರು ಗೋವುಗಳ ಮಾಂಸವನ್ನು ಅಕ್ರಮ ಮಾರಾಟದಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ದಿನನಿತ್ಯ ನೂರಾರು ಗೋವುಗಳನ್ನು ಹತ್ಯೆ ಮಾಡಿ ಮಾಂಸ ತಯಾರಿಸಿ ಮಾಂಸವನ್ನು ಹಾಸನ, ಚನ್ನರಾಯಪಟ್ಟಣ, ಅರಸೀಕರೆ ಮುಂತಾದ ಕಡೆಗಳಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಗೋವುಗಳನ್ನು ವಧೆ ಮಾಡುವಾಗಲೇ ಪೊಲೀಸರು ದಾಳಿ ನಡೆಸಿದ್ದು, ದುಷ್ಕರ್ಮಿಗಳು ಕೂಡಲೇ ಪರಾರಿಯಾಗಿದ್ದಾರೆ. ಗೋವುಗಳನ್ನು ಸಂಹರಿಸಿ, ಅವುಗಳ ರಕ್ತವನ್ನು ಕೆರೆ ಬಿಡುತ್ತಿದ್ದರು ಎಂಬ ಕುರಿತು ಕೂಡ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗೋಮಾಂಸವನ್ನು ವಶಪಡಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸಿಂಧಿ ಕರುಗಳ ರಕ್ಷಣೆ

ಈ ನಡುವೆ ಚನ್ನರಾಯಪಟ್ಟಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸಿಂಧಿ ಕರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಬೆಳಗಿನ ಜಾವ 4.30ರ ಸುಮಾರಿಗೆ ಪೊಲೀಸರು ದಾಳಿ ನಡೆಸಿದ ಪೊಲೀಸರು 26 ಸಿಂಧಿ ಕರುಗಳನ್ನು ರಕ್ಷಿಸಿದ್ದಾರೆ.   ಇನ್ನು ಪೊಲೀಸರನ್ನು ಕಾಣುತ್ತಲೇ ವಾಹನ ಚಾಲಕ ಸೇರಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಸಿಂಧಿ ಕರುಗಳನ್ನು ವಧೆ ಮಾಡಿ ಅದರ ಮಾಂಸವನ್ನು ಕುರಿ ಮಾಂಸದೊಂದಿಗೆ ಸೇರಿಸಿ ಮಾರಾಟ ಮಾಡಲಾಗುತ್ತದೆ ಎಂಬ ಆರೋಪ ಮೊದಲಿಂದಲೂ ಕೇಳಿಬರುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತೆ ಸಿಂಧಿ ಕರುಗಳನ್ನು ಸಾಗಿಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ