October 5, 2024

ಮೂಡಿಗೆರೆ ಪಟ್ಟಣದ ಹೊರವಲಯದ ಕೊಲ್ಲಿಬೈಲ್ ಸಮೀಪ ಶ್ರೀ ಕಣಿವೆ ಬಸವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸೋಮವಾರ ವಾರ್ಷಿಕ ಪೂಜೆ ನಡೆಯಿತು.
ಶ್ರೀ ಕಣಿವೆ ಬಸವೇಶ್ವರ ಸ್ವಾಮಿ ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳ ನಂಬಿಕೆಯ ಆರಾಧ್ಯ ದೇವರಾಗಿದ್ದು, ಪ್ರತಿ ವರ್ಷ ಇಲ್ಲಿ ಭಕ್ತರೆಲ್ಲಾ ಸೇರಿ ವಾರ್ಷಿಕ ಪೂಜೆ ನೆರವೇರಿಸುತ್ತಾರೆ ಶ್ರೀ ಕಣಿವೆ ಬಸವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರೆ ಆ ದಿನ ಅಥವಾ ಮೂರ್ನಾಲ್ಕು ದಿನಗಳಲ್ಲಿ ಮಳೆ ಬರುತ್ತದೆ ಎಂಬುದು ವಾಡಿಕೆ.

ಈ ಬಾರಿ ಬರಗಾಲ ಎದುರಾಗಿದ್ದರಿಂದ ಪಟ್ಟಣದ ಸುತ್ತಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಶ್ರೀ ಕಣಿವೆ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ ಮಹಾ ಮಂಗಳಾರತಿ ನಂತರ ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಆದಿಚುಂಚನಗಿರಿ ಶೃಂಗೇರಿ ಶಾಖಾಮಠದ ಶ್ರೀ ಗುಣನಾಥ ಸ್ವಾಮಿಗಳು ಉಪಸ್ಥಿತರಿದ್ದು ಭಕ್ತರನ್ನು ಆಶೀರ್ವದಿಸಿದರು.

ಸಮಿತಿಯ ಸದಸ್ಯರು ಮತ್ತು ಗ್ರಾಮಸ್ಥರು ಶ್ರದ್ಧಾಭಕ್ತಿಯಿಂದ ಪೂಜಾ ಕಾರ್ಯಗಳನ್ನು ನೆರವೇರಿಸಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ