ಮೂಡಿಗೆರೆ ತಾಲೂಕು ಕಚೇರಿಯಲ್ಲಿ ತಾಲೂಕು ಆಡಳಿತದಿಂದ ಡಾ. ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆ ನಡೆಯಿತು.
ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಂತರ ಅವರ ವ್ಯಕ್ತಿತ್ವವನ್ನು ಗುಣಗಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ದಲ್ಜೀತ್ ಕುಮಾರ್, ತಹಸೀಲ್ದಾರ್ ಶೈಲೇಶ್ ಎಸ್.ಪರಮಾನಂದ, ಶಿರಸ್ತೆದಾರ್ ಕುಮಾರ್, ಬಾಲ್ ಬ್ಯಾಟ್ಮಿಟನ್ ಅಸೋಸಿಯೇಷನ್ ರಾಜ್ಯ ಉಪಾಧ್ಯಕ್ಷ ಡಿ.ಕೆ.ಲಕ್ಷ್ಮಣಗೌಡ, ಬಾಲವಿಕಾಸ ಅಕಾಡೆಮಿ ಸದಸ್ಯ ಬಕ್ಕಿ ಮಂಜು ಸೇರಿದಂತೆ ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.