October 5, 2024

ಪ್ರಜಾಪ್ರಭುತ್ವದಲ್ಲಿ ಉತ್ತಮ ಸರಕಾರ ಆಡಳಿತಕ್ಕೆ ಬರಬೇಕು. ಜತೆಗೆ ವಿರೋಧ ಪಕ್ಷ ಕೂಡ ಪ್ರಭಲವಾಗಿರಬೇಕು. ಆಗ ಮಾತ್ರ ಜನತೆಗೆ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಉಡುಪಿ ಚಿಕ್ಕಮಗಳೂರು ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ಅವರು ಭಾನುವಾರ ಸಂಜೆ ಮೂಡಿಗೆರೆ ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಮತ್ತು ಕಾರ್ಯಕ್ರರ್ತರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್ ಆಡಳಿತದಲ್ಲಿದ್ದಾಗ ವಿಪಕ್ಷ ನಾಯಕರ ಮಾತಿಗೆ ಬೆಲೆ ನೀಡಲಾಗುತ್ತಿತ್ತು. ಆದರೆ ಬಿಜೆಪಿ ಅಧಿಕಾರದಲ್ಲಿದ್ದಾಗ ವಿಪಕ್ಷದವರ ಮಾತನ್ನು ಕೇಳುವ ಮನಸ್ಥಿತಿಯೇ ಇಟ್ಟುಕೊಂಡಿರಲಿಲ್ಲ. ಕೇಂದ್ರದಲ್ಲಿ ಮೋದಿ ಸರಕಾರ ಅಧಿಕಾರಕ್ಕೆ ಬರುವ ಮುನ್ನ ಜನರಿಗೆ ನೀಡಿದ ಭರವಸೆ ಒಂದನ್ನೂ ಈಡೇರಿಸಿಲ್ಲ. ಇದನ್ನು ದೇಶದ ಜನತೆ ಪ್ರಶ್ನೆ ಮಾಡಲಿಲ್ಲ. ಹಾಗಾಗಿ ಬಿಜೆಪಿಯವರು ಪೊಳ್ಳು ಭರವಸೆ ನೀಡುತ್ತಲೇ ಅಧಿಕಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ. ನುಡಿದಂತೆ ನಡೆದ ಕಾಂಗ್ರೆಸ್ ಹಾಗೂ ಪೊಳ್ಳು ಭರವಸೆ ನಿಡುವ ಬಿಜೆಪಿ ಬಗ್ಗೆ ಜನ ತಾಳೆ ಹಾಕಲು ಪ್ರಾರಂಭಿಸಿದ್ದಾರೆ. ಇದರಿಂದ ಬಿಜೆಪಿಯವರಿಗೆ ಸೋಲಿನ ನಡುಕ ಉಂಟಾಗಿದೆ ಎಂದು ಹೇಳಿದರು.

ಮಾಜಿ ಸಭಾಪತಿ ಬಿ.ಎಲ್.ಶಂಕರ್ ಮಾತನಾಡಿ, ಜನರ ಭಾವನೆ ಹಾಗೂ ಸುಳ್ಳು ಭರವಸೆ ನೀಡುವ ಮೂಲಕ ಅಧಿಕಾರ ಹಿಡಿದ ಬಿಜೆಪಿ ಕೇಂದ್ರ ಸರಕಾರ ಬೆಲೆ ಏರಿಕೆ, ಆರ್ಥಿಕ ಸಂಕಷ್ಟ, ನಿರುದ್ಯೋಗ ಸಮಸ್ಯೆ ಸೃಷ್ಟಿ ಮಾಡಿ ಜನರ ಬದುಕು ಕಿತ್ತುಕೊಂಡಿದೆ. ಜನರಿಗೆ ಬದುಕಿಗಾಗಿ ರಾಜಕಾರಣ ಮಾಡುತ್ತಿರುವುದು ಕಾಂಗ್ರೆಸ್ ಮಾತ್ರ. ಅಲ್ಲದೇ ನುಡಿದಂತೆ ನುಡಿಯುವ ಪಕ್ಷವೊಂದಿದ್ದರೆ ಅದು ಕಾಂಗ್ರೆಸ್ ಮಾತ್ರ ಎಂಬುದು ಜನರಿಗೆ ಅರಿವಾಗಿದೆ. ಹಾಗಾಗಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‍ನ್ನು ಬೆಂಬಲಿಸಿ, ಬಿಜೆಪಿಯನ್ನು ಹೊರ ಹಾಕಿದ್ದಾರೆ. ಅಲ್ಲದೇ ಸಂಸದೀಯ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಉಳಿಸಲು ಮೋದಿ ಸರಕಾರ ತೊಲಗಿಸಲು ದೇಶದ ಜನತೆ ಸಿದ್ದರಾಗಿದ್ದಾರೆಂದ ಅವರು, ಈ ಕ್ಷೇತ್ರದಲ್ಲಿ ಮಾಜಿ ಶಾಸಕರಾದ ಬಿ.ಬಿ.ನಿಂಗಯ್ಯ, ಎಂ.ಪಿ.ಕುಮಾರಸ್ವಾಮಿ ಕಾಂಗ್ರೆಸ್ ಸೇರ್ಪಡೆಗೊಂಡಿರುವುದು ಪಕ್ಷಕ್ಕೆ ಇನ್ನಷ್ಟು ಬಲ ಬಂದಿದೆ. ಸಂಸತ್‍ನಲ್ಲಿ ಜನತೆ ಸಮಸ್ಯೆ ಬಗೆಹರಿಸುವ ಜತೆಗೆ ಹೆಚ್ಚಿನ ಅನುದಾನ ತರುವ ಚಾತುರ್ಯತೆ ಹೊಂದಿರುವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.

ಶಾಸಕಿ ನಯನಾ ಮೋಟಮ್ಮ, ಮಾಜಿ ಸಚಿವರಾದ ಮೋಟಮ್ಮ, ಬಿ.ಬಿ.ನಿಂಗಯ್ಯ, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹೆಚ್. ಜಿ. ಸುರೇಂದ್ರ ಮಾತನಾಡಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ