October 5, 2024

ಬುಧವಾರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1 ಫಲಿತಾಂಶವನ್ನು   ಪ್ರಕಟ ಮಾಡಲಾಗುತ್ತಿದೆ. ಅಧಿಕೃತ ವೆಬ್ ಸೈಟ್  https://karresults.nic.in ಬೆಳಗ್ಗೆ 11:00 ಗಂಟೆಯ ನಂತರ ಫಲಿತಾಂಶ ಲಭ್ಯವಾಗಲಿದೆ.

ಬೆಳಗ್ಗೆ 10:00 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದೆ.

ರಾಜ್ಯಾದ್ಯಂತ 2024ರ ದ್ವಿತೀಯ ಪಿಯುಸಿಗೆ 6,98,627 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 3,30,644 ಬಾಲಕರು, 3,67,980 ಬಾಲಕಿಯರು ಪರೀಕ್ಷೆಯನ್ನು ಬರೆದಿದ್ದಾರೆ. ರಾಜ್ಯಾದ್ಯಂತ ಪಿಯುಸಿ ಪರೀಕ್ಷೆಯು 1,124 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದೆ. 2023-24ನೇ ಸಾಲಿನಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷಾ ಕ್ರಮದಲ್ಲಿ 80+20 ಮಾದರಿಯಂತೆ (80 ಅಂಕಗಳಿಗೆ ಲಿಖಿತ ಪರೀಕ್ಷೆ ಮತ್ತು 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನ) ಅಂಕಗಳನ್ನು ನೀಡಲಾಗಿರುತ್ತದೆ.

ಮಾ.25ರಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗಿತ್ತು. ಈಗ ಮೌಲ್ಯಮಾಪನ ಕಾರ್ಯ ಮುಗಿದಿದ್ದು, ಅಂಕಗಳನ್ನು ಕಂಪ್ಯೂಟರೀಕರಣಗೊಳಿಸಲಾಗಿದೆ.

ನಿಮ್ಮ ಫಲಿತಾಂಶವನ್ನು ನೋಡುವುದು ಹೇಗೆ?

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ