October 5, 2024

ಮೃತ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರಕ್ಕೆ ಸೌದೆ ಸಂಗ್ರಹಿಸುತ್ತಿದ್ದ ಸಂದರ್ಭದಲ್ಲಿ ಕಾಡಾನೆ ದಾಳಿ ಓರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಅರೇಹಳ್ಳಿ ಸಮೀಪ ಈ ದುರ್ಘಟನೆ ನಡೆದಿದೆ. ಅರೇಹಳ್ಳಿ ಸಮೀಪದ ಬಾಳಗುಲಿ ಗ್ರಾಮದಲ್ಲಿ ಇಂದು(ಶನಿವಾರ) ಬೆಳಿಗ್ಗೆ ಈ ಘಟನೆ ನಡೆದಿದೆ.

ಒಂಟಿ ಸಲಗ ದಾಳಿ ಮಾಡಿದ ಪರಿಣಾಮ ಓರ್ವ ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅರೇಹಳ್ಳಿಯ ನಂಜಪ್ಪ ಸ್ಟೋರ್ ಮಾಲೀಕ ಮಾದೇಗೌಡ ಎಂಬುವವರು ಶುಕ್ರವಾರ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇಂದು ಶನಿವಾರ ಅಂತ್ಯಸಂಸ್ಕಾರವನ್ನು ಬಾಳಗುಲಿಯ ತೋಟದಲ್ಲಿ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದರು.

ಹಾಗಾಗಿ ಶವಸಂಸ್ಕಾರಕ್ಕೆ ಸೌದೆ ಮಾಡಲು ಮಲಸಾವರದ ಗಣೇಶ್ ಮತ್ತಿತರರು ಬಾಳಗುಲಿಗೆ ತೆರಳಿ ಸೌದೆಯನ್ನು ಯಂತ್ರದ ಮೂಲಕ ತುಂಡರಿಸುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಇವರಿದ್ದ ಸ್ಥಳಕ್ಕೆ ಬಂದ ಒಂಟಿ ಸಲಗವೊಂದು ಗಣೇಶ್ ಅವರ ಮೇಲೆ ದಾಳಿ ಮಾಡಿ ಅವರನ್ನು ಸೊಂಡಿಲಿನಿಂದ ಹಿಡಿದು ದೂರಕ್ಕೆ ಎಸೆದಿದೆ. ಉಳಿದವರು ಬೊಬ್ಬೆ ಹಾಕಿದಾಗ ಆನೆ ಸ್ಥಳದಿಂದ ತೆರಳಿದೆ.

ಆನೆ ದಾಳಿಗೊಳಗಾದ ಗಣೇಶ್ ಅವರ ತಲೆ ಮತ್ತು ಎದೆಯ ಭಾಗದಕ್ಕೆ ತೀವ್ರ ಪೆಟ್ಟಾಗಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ಬೇಲೂರು,ಸಕಲೇಶಪುರ ಆನೆ ಕಾರ್ಯಪಡೆ ಸಿಬ್ಬಂದಿಗಳು ಗಾಯಗೊಂಡವರಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಹಾಸನದಿಂದ ಹೆಚ್ಚಿನ ಚಿಕಿತ್ಸೆಗೆಂದು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಕಳುಹಿಸಕೊಡಲಾಗಿದೆ ಎಂದು ತಿಳಿದುಬಂದಿದೆ.

ಹಾಗೇಯೇ ಸಮೀಪದಲ್ಲಿಯೇ ಇರುವ ಹಮೀದ್ ಎನ್ನುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೂ ಆನೆ ದಾಳಿ ಮಾಡಲು ಹೋಗಿದ್ದು, ತಪ್ಪಿಸಿಕೊಂಡು ಓಡುವ ಸಮಯದಲ್ಲಿ ಓರ್ವ ಪುರುಷ ಮತ್ತು ಓರ್ವ ಮಹಿಳಾ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಭಾಗದಲ್ಲಿ ಕಾಡಾನೆಗಳು ಹಿಂಡು ಹಿಂಡಾಗಿ ಸಂಚರಿಸುತ್ತಿದ್ದು, ನಿರಂತರವಾಗಿ ಜನರ ಜೀವ ಹಾನಿ ಬೆಳೆಹಾನಿಗೆ ಕಾರಣವಾಗುತ್ತಿದ್ದು, ರೈತರು ಕಾಡಾನೆ ದಾಳಿಯಿಂದ ನಲುಗಿ ಹೋಗಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ