October 5, 2024

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಒಣಹವೆ ವಾತಾವರಣ ಮುಂದುವರಿಯಲಿದ್ದು, ಏಪ್ರಿಲ್ 18ರಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬುಧವಾರ ಮತ್ತು ಗುರುವಾರ ರಾಜ್ಯದ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಶಿವಮೊಗ್ಗ ಮತ್ತು ಕೊಡಗು ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.

ಏಪ್ರಿಲ್ 18ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ.

ಈ ನಡುವೆ ಈ ವರ್ಷ ಜೂನ್ ನಿಂದ ಸೆಪ್ಟಂಬರ್ ವರೆಗೆ ಉತ್ತಮ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಡಿಕೆಗಿಂತ ಕೊಂಚ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

About Author