October 5, 2024

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ತೀವ್ರ ಉಪಟಳ ನೀಡುತ್ತಿದ್ದ ಕರಡಿ ಎಂಬ ಕಾಡಾನೆಯನ್ನು ಸೆರೆಹಿಡಿಯಲಾಗಿದೆ.

ಇಂದು ನಡೆದ ಕಾರ್ಯಾಚರಣೆಯಲ್ಲಿ ಬೇಲೂರು ತಾಲ್ಲೂಕಿನ ವಾಟೇಹಳ್ಳಿಯ ಐಬಿಸಿ ಕಾಫಿ ತೋಟದಲ್ಲಿ ಅರಣ್ಯ ಇಲಾಖೆ ತಂಡ ಕರಡಿ ಆನೆಯನ್ನು ಸೆರೆ ಹಿಡಿದಿದೆ. ಅಭಿಮನ್ಯು, ಪ್ರಶಾಂತ, ಸುಗ್ರೀವ, ಕರ್ನಾಟಕ ಭೀಮ, ಅಶ್ವತ್ಥಾಮ, ಮಹೇಂದ್ರ ಸೇರಿ ಎಂಟು ಆನೆಗಳಿಂದ   ಕಾರ್ಯಾಚರಣೆ ನಡೆಸಿ ಕಾಡಾನೆ ಕರಡಿಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ.

ಕಾರ್ಯಾಚರಣೆ ಪ್ರಾರಂಭಿಸಿದ ಮೊದಲ ದಿನವೇ ಕಾಡಾನೆಯನ್ನು ಸೆರೆಹಿಡಿಯಲಾಗಿದೆ.

ಸೆರೆ ಹಿಡಿದ ಕಾಡಾನೆ ಕರಡಿಯನ್ನು ದುಬಾರೆ ಸಾಕಾನೆ ಶಿಬಿರಕ್ಕೆ ಸ್ಥಳಾಂತರ ಮಾಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಕರಡಿ ಕಾಡಾನೆ ಜನವರಿ 4ರಂದು ಬೇಲೂರು ತಾಲ್ಲೂಕಿನ ಮತ್ತಾವರ ಬಳಿ ಕಾರ್ಮಿಕ ವಸಂತ್​ ಎಂಬುವವರನ್ನು ಕೊಂದಿತ್ತು. ಬಳಿಕ ಬೇಲೂರು ಸಕಲೇಶಪುರ ಭಾಗದಲ್ಲಿ ಹಲವರ ಮೇಲೆ‌ ದಾಳಿ‌ ಮಾಡಿ ಆತಂಕ ಸೃಷ್ಟಿ ಮಾಡಿತ್ತು. ಇತ್ತೀಚೆಗೆ ಎರಡು ಕಾಡಾನೆಗಳು ಅರೇಹಳ್ಳಿ ಸಮೀಪ ಗ್ರಾಮದೊಳಗೆ ಕಾದಾಟ ನಡೆಸಿದ್ದವು. ಅವುಗಳಲ್ಲಿ ಒಂದು ಆನೆ ಈಗ ಸೆರೆಹಿಡಿದಿರುವ ಕರಡಿ ಆನೆ ಆಗಿತ್ತು. ಈ ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತಗೊಂಡಿದ್ದರು. ಕರಡಿ ಹೆಸರಿನ ಈ ಆನೆಯ ಉಪಟಳ ಅತಿಯಾಗಿತ್ತು.

ಕರಡಿ ಹೆಸರಿನ ಈ ಆನೆಯನ್ನು ಸೆರೆಹಿಡಿಯಲು ಕಳೆದ ಐದಾರು ತಿಂಗಳಿಂದ ಪ್ರಯತ್ನ ನಡೆಸಲಾಗಿತ್ತು. ಆದರೆ ಈ ಆನೆಗೆ ಮದ ಬಂದಿದ್ದರಿಂದ ಸೆರೆಹಿಡಿಯುವ ಕಾರ್ಯಾಚರಣೆ ಮುಂದೂಡುತ್ತಾ ಬರಲಾಗಿತ್ತು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ