October 5, 2024

ಶಿವಮೊಗ್ಗದ ಮಾಜಿ ಶಾಸಕ, ಸಚಿವ ಕೆ.ಎಸ್ ಈಶ್ವರಪ್ಪ  ಅವರು ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದಾರೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ.

ಈ ಬಗ್ಗೆ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಪಕ್ಷದ ಸೂಚನೆಯನ್ನು ಕಡೆಗಣಿಸಿ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಪಕ್ಷದ ಮುಜುಗರಕ್ಕೆ ಕಾರಣವಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, ಮುಂದಿನ 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಈಶ್ವರಪ್ಪ ಅವರಿಗೆ ಆದೇಶ ಪತ್ರದಲ್ಲಿ ಲಿಂಗರಾಜ್ ಪಾಟೀಲ್ ತಿಳಿಸಿದ್ದಾರೆ.

ನಾಮಪತ್ರ ಹಿಂಪಡೆಯುವ ಸಾಧ್ಯತೆ ಇದ್ದ ಹಿನ್ನೆಲೆ ಈವರೆಗೂ ಬಿಜೆಪಿ ಕ್ರಮ ತೆಗೆದುಕೊಂಡಿರಲಿಲ್ಲ. ಆದರೂ ಈಶ್ವರಪ್ಪ ಅವರು ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಅವರನ್ನು ಉಚ್ಚಾಟನೆ ಮಾಡಲಾಗಿದೆ.

ಈಶ್ವರಪ್ಪ ತಮ್ಮ ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ ಕೇಳಿದ್ದರು. ಆದರೆ ಪಕ್ಷ ಅವರ ಪುತ್ರನಿಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕೆ.ಎಸ್‌.ಈಶ್ವರಪ್ಪ ಅಸಮಾಧಾನಗೊಂಡಿದ್ದರು. ಹೀಗಾಗಿ ಅವರು ಶಿವಮೊಗ್ಗ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುತಿದ್ದಾರೆ.

 

ಸಿಡಿಲು ಬಡಿದು ವ್ಯಕ್ತಿಗೆ ಗಂಭೀರ ಗಾಯ : ಮೂಡಿಗೆರೆ ತಾಲ್ಲೂಕಿನ ಬೆಟ್ಟಗೆರೆ ಗ್ರಾಮದಲ್ಲಿ ಘಟನೆ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ