October 5, 2024

ಕಾವಿಧರಿಸಿ ಸಾಧುಸಂತರಂತೆ ಮನೆಗೆ ಬಂದವರು ಮನೆಯಲ್ಲಿದ್ದ ಮಹಿಳೆಯ ಪ್ರಜ್ಞೆ ತಪ್ಪಿಸಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ತರೀಕೆರೆ ಪಟ್ಟಣದ ಸಮೀಪವೇ ಕಾವಿದಾರಿಗಳು ಮಹಿಳೆಗೆ ಮಂಕುಬೂದಿ ಎರಚಿ ಚಿನ್ನಾಭರಣ ಕಳ್ಳತನ ಮಾಡಿರುತ್ತಾರೆ.

ನಾಲ್ವರು ಕಾವಿಧಾರಿಗಳು ಮಹಿಳೆಯ ಮನೆಗೆ ಬಂದಿದ್ದಾರೆ. ಬಳಿಕ ಪೂಜೆ ಮಾಡುವುದಾಗಿ ನಂಬಿಸಿ, ಯಾವುದೋ ರಾಸಾಯನಿಕ ಬಳಸಿ ಮಹಿಳೆಯ ಎಚ್ಚರ ತಪ್ಪಿಸಿದ್ದಾರೆ. ನಂತರ  ಮಹಿಳೆ ಧರಿಸಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಮಹಿಳೆಗೆ ಎಚ್ಚರವಾದ ಮೇಲೆ ಕಳ್ಳತನವಾಗಿರುವುದು ಗೊತ್ತಾಗಿದೆ. ಈ ವೇಳೆ ಮಹಿಳೆ ನೆರೆಹೊರೆಯವರಿಗೆ ನಡೆದ ಘಟನೆ ತಿಳಿಸಿದ್ದಾರೆ.

ಕಳ್ಳರನ್ನು ಹುಡುಕಿ ಹೋದ ಜನ, ರಸ್ತೆಯಲ್ಲಿ ಹೋಗುತ್ತಿದ್ದ ಅಮಾಯಕ ಬುಡುಬುಡುಕೆ ಕಾವಿಧಾರಿ ಒಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ಬಳಿಕ ಆತ ತಪ್ಪಿತಸ್ಥನಲ್ಲ ಎಂಬುದು ತಿಳಿದು ಬಂದಿದೆ.

ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ತಾಲೂಕಿನಲ್ಲಿ ಇಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ