October 5, 2024

ಬೇಸಿಗೆ ರಜೆಯಲ್ಲಿ ಮಕ್ಕಳು ಮನೆಯಲ್ಲಿ ಕಾಲಹರಣ ಮಾಡುವ ಬದಲು ಬೇಸಿಗೆ ಶಿಬಿರಗಳಿಗೆ ಮಕ್ಕಳು ಪಾಲ್ಗೋಂಡರೆ ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಸಾಧ್ಯವಾಗುತ್ತದೆ ಎಂದು ಜೇಸಿ ಸಂಸ್ಥೆ ಅಧ್ಯಕ್ಷ ಸುಪ್ರೀತ್ ಕಾರ್ಬೈಲ್ ಹೇಳಿದರು.

ಅವರು ಇತ್ತೀಚೆಗೆ ಜೇಸಿ ಭವನದಲ್ಲಿ ಏರ್ಪಡಿಸಿದ್ದ 10 ದಿನಗಳ ಬೇಸಿಗೆ ಶಿಬಿರ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು.

ಜೇಸಿ ಸಂಸ್ಥೆಯು ಪ್ರತಿ ವರ್ಷ ಬೇಸಿಗೆ ಶಿಬಿರ ಆಯೋಜಿಸುತ್ತಾ ಬಂದಿದೆ. ಶಿಬಿರದಲ್ಲಿ ಶಿಕ್ಷಣದ ಜತೆಗೆ ಹಾಡು, ಭಾಷಣ, ನೃತ್ಯ, ಚಿತ್ರಕಲೆ ಸೇರಿದಂತೆ ಅನೇಕ ಬಗೆಯ ಪ್ರತಿಭಾ ಚಟುವಟಿಕೆಯನ್ನು ಕಲಿಸಲಾಗುತ್ತದೆ. ಇದರಿಂದ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳು ಹೊರ ಬಂದಿರುವುದು ಅವರ ಪೋಷಕರು ಗಮನಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಹಾಗಾಗಿ ರಜೆ ದಿನಗಳಲ್ಲಿ ನಡೆಯುವ ಬೇಸಿಗೆ ಶಿಬಿರಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕಳುಹಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಶಿಬಿರದ ಮುಖ್ಯ ಆಯೋಜಕರಾದ ಸೌಮ್ಯಶ್ರೀ, ವಿನಯ್, ಕಾರ್ತಿಕ್, ಜೇಸಿರೇಟ್ ದಿವ್ಯ ಸುಪ್ರಿತ್, ವಿಶ್ವಕುಮಾರ್, ಶ್ರಾವ್ಯ ಉದಯ್, ಶೃತಿ ದೀಕ್ಷಿತ್ ಮತ್ತಿತರರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ