October 5, 2024

ಅಬಕಾರಿ ನೀತಿ   ಜಾರಿ ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಕಳೆದ 50 ದಿನಗಳಿಂದ ಜೈಲಿನಲ್ಲೇ ಇದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌  ಶುಕ್ರವಾರ  ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಜೂನ್‌ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದ ಕಾರಣ ಶುಕ್ರವಾರ ಸಂಜೆ ತಿಹಾರ ಜೈಲಿನಿಂದ ಅವರನ್ನು ಬಿಡುಗಡೆ ಮಾಡಲಾಯಿತು. ಕೇಜ್ರಿವಾಲ್‌ ಅವರು ಜೈಲಿನಿಂದ ಹೊರಬರುತ್ತಲೇ ಆಪ್‌ ಕಾರ್ಯಕರ್ತರು ಜೈಕಾರ ಕೂಗಿ ಅವರನ್ನು ಸ್ವಾಗತಿಸಿದರು.

ಯಾವುದೇ ಕಡತಗಳಿಗೆ ಸಹಿ ಹಾಕಬಾರದು ಎಂಬುದು ಸೇರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ನ್ಯಾಯಾಲಯವು ಹಲವು ಷರತ್ತುಗಳನ್ನು ವಿಧಿಸಿದೆ. ಹಾಗೆಯೇ, ಜೂನ್‌ 2ರಂದು ಮತ್ತೆ ಶರಣಾಗಬೇಕು ಎಂಬುದಾಗಿ ಸೂಚಿಸಿದೆ. ಅಬಕಾರಿ ನೀತಿ ಹಗರಣದಲ್ಲಿ ಮಾರ್ಚ್‌ 21ರಂದು ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿತ್ತು. ಹಲವು ಬಾರಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿತ್ತು. ಈಗ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿದ್ದು, ಜೈಲಿನಿಂದ ಹೊರಬಂದಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ