October 5, 2024

SSLC ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಸರ್ಕಾರಿ ವಸತಿ ಶಾಲೆ ವಿದ್ಯಾರ್ಥಿನಿಯನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನ ತಮ್ಮ ನಿವಾಸದಲ್ಲಿ ಸನ್ಮಾನಿಸಿ ಪ್ರೋತ್ಸಾಹ ಧನ ನೀಡಿದರು.

ಇತ್ತೀಚೆಗೆ ಪ್ರಕಟಗೊಂಡ ರಾಜ್ಯಪಠ್ಯಕ್ರಮದ SSLC ಪರೀಕ್ಷೆಯ ಫಲಿತಾಂಶದಲ್ಲಿ 625ಕ್ಕೆ 625 ಅಂಕ ಪಡೆದು ರಾಜ್ಯಕ್ಕೇ ಪ್ರಥಮ ಸ್ಥಾನ ಗಳಿಸಿದ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಅವರನ್ನು  ಡಿ.ಕೆ ಶಿವಕುಮಾರ್ ಸನ್ಮಾನಿಸಿದರು. ಅಲ್ಲದೆ ವಿದ್ಯಾರ್ಥಿನಿಗೆ ಪ್ರೋತ್ಸಾಹ ಧನವಾಗಿ 5 ಲಕ್ಷರೂ ಬಹುಮಾನ ನೀಡಿದರು.

ಅಂಕಿತಾ ಮಾತ್ರವಲ್ಲದೇ ಮಂಡ್ಯದ ವಿದ್ಯಾರ್ಥಿ ನವನೀತ್ ಅವರನ್ನೂ ಸನ್ಮಾನಿಸಿದ ಡಿಕೆಶಿ ಅವರಿಗೆ 2 ಲಕ್ಷ ರೂ ಹಣವನ್ನು ಬಹುಮಾನವಾಗಿ ನೀಡಿದರು.

ಕಳೆದ ವಾರ SSLC ಪರೀಕ್ಷಾ ಫಲಿತಾಂಶ ಪ್ರಕಟವಾದಾಗ ರಾಜ್ಯಕ್ಕೇ ಟಾಪರ್ ಆಗಿರುವ ಬಾಗಲಕೋಟೆಯ ವಿದ್ಯಾರ್ಥಿನಿ ಅಂಕಿತಾ ಕುಟುಂಬಸ್ಥರಿಗೆ ಕರೆ ಮಾಡಿದ್ದ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದರು. ಈ ವೇಳೆ “ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಮೊದಲ ಸ್ಥಾನ ಪಡೆದಿರುವುದು ನನಗೆ ಬಹಳ ಸಂತೋಷ ತಂದಿದೆ. ನಿನಗೆ ಶುಭವಾಗಲಿ. ಬೆಂಗಳೂರಿಗೆ ಬಂದಾಗ ತಮ್ಮ ಮನೆಗೆ ಬಾ” ಎಂದು ಡಿಸಿಎಂ ಅಂಕಿತಾರನ್ನು ಆಹ್ವಾನಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ