October 5, 2024

ಮೂಡಿಗೆರೆ ತಾಲ್ಲೂಕಿನ ಚಿನ್ನಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಂದ್ರಾಪುರ ಗ್ರಾಮಸ್ಥರು ವಿದ್ಯುತ್ ಮತ್ತು ನೀರಿಗಾಗಿ ಆಗ್ರಹಿಸಿ ಜನ್ನಾಪುರ ಮೆಸ್ಕಾಂ ಕಛೇರಿ ಎದರು ಪ್ರತಿಭಟನೆ ನಡೆಸಿದರು.

ಚಂದ್ರಾಪುರ ಗ್ರಾಮದ ನೂರಾರು ಜನರು ಚಿನ್ನಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮೆಸ್ಕಾಂ ಕಛೇರಿ ಎದರು ಜಮಾಯಿಸಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಫೋನ್ ಮುಖಾಂತರ ಶಾಸಕಿ ನಯನ ಮೋಟಮ್ಮರವರಿಗೂ ದೂರು ಸಲ್ಲಿಸಿದರು. ಗ್ರಾಮಸ್ಥರು ಕೂಡಲೇ ಸಮಸ್ಯೆ ಬಗೆಹರಿಸಿ ಕೊಡಬೇಕೆಂದು ಕೇಳಿಕೊಂಡರು ಇಲ್ಲವಾದಲ್ಲಿ ಮೂಡಿಗೆರೆ ತಾಲ್ಲೂಕು ಕೇಂದ್ರದಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ಸಮಸ್ಯೆಯ ಬಗ್ಗೆ ಕೂಡಲೇ ಸ್ಪಂದಿಸುವಂತೆ ಅಧಿಕಾರಿಗಳು ಶಾಸಕಿ ನಯನಾ ಮೋಟಮ್ಮ ಸೂಚನೆ ನೀಡಿದರು. ಆದಷ್ಟು ಬೇಗ ಗ್ರಾಮಸ್ಥರ ಸಮಸ್ಯೆ ಬಗೆಹರಿಸಲು ಕ್ರಮ ವಹಿಸುವುದಾಗ ದೂರವಾಣಿ ಮೂಲಕ ಭರವಸೆ ನೀಡಿದರು.

ಗ್ರಾಮ ಪಂಚಾಯತಿ ಸದಸ್ಯ ಸಮಂತ ಮಾತನಾಡಿ ಗ್ರಾಮದಲ್ಲಿ ಕುಡಿಯುವ ನೀರಿನ ಮತ್ತು ವಿದ್ಯುತ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ರಾಮದ ಜನರು ಕುಡಿಯಲು ನೀರಿಲ್ಲದೇ ಪರದಾಡುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣ ವಿದ್ಯುತ್ ಕಣ್ಣಾಮುಚ್ಚಾಲೆ. ಗ್ರಾಮದಲ್ಲಿ ಮಳೆ ಗಾಳಿ ಬಂದ ಕೂಡಲೇ ವಿದ್ಯುತ್ ಕಡಿತವಾಗುತ್ತದೆ. ವಾರಗಟ್ಟಲೇ ವಿದ್ಯುತ್ ಸರಿಯಾಗುವುದಿಲ್ಲ. ಇದರಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಇದರ ಬಗ್ಗೆ ಮೆಸ್ಕಾಂ ಅಧಿಕಾರಿಗಳಿಗೆ ಅನೇಕ ಬಾರಿ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.

ಸ್ಥಳದಲ್ಲಿ ಮೆಸ್ಕಾಂ ಅಧಿಕಾರಿ ರವಿಕುಮಾರ್ ರವರು ಹಾಜರಿದ್ದು, ಜನರ ಅಹವಾಲು ಸ್ವೀಕರಿಸಿದರು. ಆದಷ್ಟು ಬೇಗ ಚಂದ್ರಾಪುರ ಗ್ರಾಮದ ವಿದ್ಯುತ್ ಸಮಸ್ಯೆಗೆ ಪರಿಹಾರ ದೊರಕಿಸುವ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಗ್ರಾಮದ ನೂರಾರು ಜನರು ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ